ಕೊಪ್ಪಳ | ಅಮಿತ್ ಶಾ ಹೇಳಿಕೆಗೆ ಖಂಡನೆ; ಸಂವಿಧಾನ ಸಂರಕ್ಷಣಾ ಸಮಿತಿ ಜ.6ರಂದು ಬಂದ್‌ಗೆ ಕರೆ

Date:

Advertisements

ಸಂಸತ್ ಸದನದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಕೇಂದ್ರ ಸಚಿವ ಅಮಿತ್‌ ಶಾ ಅಪಮಾನ ಮಾಡಿದನ್ನು ಖಂಡಿಸಿ ಜನವರಿ 6ರಂದು “ಸಂವಿಧಾನ ಸಂರಕ್ಷಣಾ ಸಮಿತಿ” ಕೊಪ್ಪಳ ಬಂದ್‌ಗೆ ಕರೆ ನೀಡಿದೆ.

ಕೊಪ್ಪಳ ನಗರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಮುಖರು ಮಾತನಾಡಿ, “ಸಂಸತ್‌ ಅಧಿವೇಶನದಲ್ಲಿ ಸಂವಿಧಾನದ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ ಬಿ ಅರ್ ಅಂಬೇಡ್ಕ‌ರ್ ಅವರ ಕುರಿತು ನಕಾರಾತ್ಮಕ ಹೇಳಿಕೆ ನೀಡಿದ್ದು, ಬಾಬಾ ಸಾಹೇಬ್‌ ಅವರಿಗೆ ಅವಮಾನ ಮಾಡಿದ್ದಾರೆ. ಸಂವಿಧಾನ ಮತ್ತು ದೇಶದ ಜನೆತೆಗೆ ಅವಮಾನ ಮಾಡಿದ್ದರಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡಲೇ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಂಪುಟದಿಂದ ವಜಾಗೊಳಿಸಿ ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ” ಎಂದು ಹೇಳಿದರು

“ಕೊಪ್ಪಳದ ಸಂವಿಧಾನ ಸಂರಕ್ಷಣಾ ಸಮಿತಿಯ ಮುಂದಾಳತ್ವದಲ್ಲಿ 2025ರ ಜನವರಿ 6ರ ಸೋಮವಾರದಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಸಂವಿಧಾನ ಸಂರಕ್ಷಣೆ ಸಮಿತಿಗೆ ವಿವಿಧ ಪ್ರಗತಿಪರ ಸಂಘಟನೆಗಳು ಅಹಿಂದ ಮತ್ತು ಅಲ್ಪಸಂಖ್ಯಾತರ ಸಂಘಟನೆಗಳು ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳ ಬೆಂಬಲದೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಾಬಾ ಸಾಹೇಬರು ಈ ದೇಶದಲ್ಲಿ ಶೋಷಣೆಗೆ ಒಳಗಾದ ಜನರಿಗೆ ಬಹುದೊಡ್ಡ ಶಕ್ತಿಯನ್ನು ನೀಡಿದ್ದಾರೆ. ಸಂವಿಧಾನ ರಕ್ಷಿಸಬೇಕಾದ ಗೃಹಮಂತ್ರಿಗಳು ಸಂವಿಧಾನ ಶಿಲ್ಪಿ ಕುರಿತು ಈ ರೀತಿ ಮಾತನಾಡಿರುವುದು ಅಕ್ಷ್ಯಮ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಜನವರಿ 6ರಂದು ಪ್ರತಿಭಟನಾ ಮೆರವಣಿಗೆ ತಾಲೂಕು ಕ್ರೀಡಾಂಗಣದಿಂದ ಸಾಲಾರ ಜಂಗ್ ರಸ್ತೆ ಮೂಲಕ ಅಂಬೇಡ್ಕ‌ರ್ ವೃತ್ತ, ಶಾರದಾ ಟಾಕೀಸ್ ಕ್ರಾಸ್, ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಅಶೋಕ ಸರ್ಕಲ್‌ಗೆ ಆಗಮಿಸಿ ಮನವಿ ಸಲ್ಲಿಸಲಾಗುವುದು. ಮೆರವಣಿಗೆಯಲ್ಲಿ ಸುಮಾರು 10 ಸಾವಿರದಷ್ಟು ಜನ ಸೇರಬಹುದು” ಎಂದು ಮುಖಂಡರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪೊಲೀಸರ ಭರ್ಜರಿ ಕಾರ್ಯಾಚರಣೆ : ₹2.80 ಲಕ್ಷ ಮೌಲ್ಯದ ನಶೆಯುಕ್ತ ವಸ್ತು ಜಪ್ತಿ : ಮೂವರ ಬಂಧನ

ಈ ಸಂದರ್ಭದಲ್ಲಿ ಹನುಮೇಶ ಕಡೆಮನಿ, ಸಲೀಂ ಖಾದ್ರಿ, ಟಿ ರತ್ನಾಕರ, ಅಲ್ಲಮಪ್ರಭು ಬೆಟ್ಟದೂರು, ಕೆ ಎಸ್ ಮೈಲಾರಪ್ಪ ವಕೀಲರು, ಈಶಪ್ಪ, ಕಾಶಪ್ಪ ಚಲವಾದಿ, ರಾಮಣ್ಣ ಚೌಡ್ಮಿ, ಕೆ ಎಸ್ ಮೈಲಾರಪ್ಪ, ಹನುಮೇಶ ಕಡೆಮನಿ, ಸೈಯದ್ ನಾಸಿರ್ ಕಂಟಿ, ಡಿ ಎಚ್ ಪೂಜಾರ, ಸಿದ್ದರಾಮ ಹೊಸಮನಿ, ಆದಿಲ್ ಪಟೇಲ್, ರಾಮಣ್ಣ ಚೌಡಿ, ಪರಶುರಾಮ ಕೆರೆಹಳ್ಳಿ, ಸಾವಿತ್ರಿ ಮುಜುಂದಾರ, ಕಾಶಪ್ಪ ಚಲವಾದಿ, ನಿಂಗಜ್ಜ ಶಹಾಪೂರ, ನಿಂಗಜ್ಜ ಬನಕಾಳ, ಎಸ್ ಎ ಫಫಾರ್, ಸಲೀಂ ಕಾದ್ರಿ, ಸಲೀಂ ಆಳವಂಡಿ, ಎಂ ಗೊಂಡಬಾಳ, ಯಲ್ಲಪ್ಪ ಹಳೇಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X