ವಿಜಯಪುರ | ಅಂಬೇಡ್ಕ‌ರ್‌ಗೆ ಅಪಮಾನ; ಕೇಂದ್ರ ಗೃಹ ಸಚಿವ ಅಮಿತ್ ಶಾ ವಜಾಕ್ಕೆ ಆಗ್ರಹ

Date:

Advertisements

ಡಾ ಅಂಬೇಡ್ಕ‌ರ್ ಅವರನ್ನು ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ವಿದ್ಯಾರ್ಥಿ ಒಕ್ಕೂಟ ದೇವರಹಿಪ್ಪರಗಿ ತಾಲೂಕು ಘಟಕ(ಪ್ರೊ. ಬಿ ಕೃಷ್ಣಪ್ಪ ಬಣ)ದಿಂದ ಪಂಜಿನ ಮೆರವಣಿಗೆ ನಡೆಸಿದರು.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಿಂದ ಅಂಬೇಡ್ಕ‌ರ್ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿ ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್‌ ಪ್ರಕಾಶ ಸಿಂದಗಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಡಿಎಸ್‌ಎಸ್‌ ಜಿಲ್ಲಾ ಸಂಘಟನೆಯ ಸಂಚಾಲಕ ಪ್ರಕಾಶ ಗುಡಿಮನಿ ಮಾತನಾಡಿ, “ಡಾ. ಬಿ ಆರ್ ಅಂಬೇಡ್ಕ‌ರ್ ಅತ್ಯುತ್ತಮ ಸಂವಿಧಾನ ರಚಿಸಿಕೊಟ್ಟಿದ್ದಾರೆ. ಬಿಜೆಪಿಯವರಿಗೆ ಈ ಸಂವಿಧಾನ ಬದಲಿಸುವ, ಮೀಸಲಾತಿ ರದ್ದುಗೊಳಿಸುವ ಹಿಡನ್ ಅಜೆಂಡಾ ಇದೆ” ಎಂದು ಆರೋಪಿಸಿದರು.

Advertisements

“ಕೇಂದ್ರ ಗೃಹ ಸಚಿವರು ರಾಜ್ಯ ಸಭೆಯಲ್ಲಿ ಅಂಬೇಡ್ಕರ್‌ ಬಗ್ಗೆ ಹಗುರವಾಗಿ ಮಾತನಾಡಿದ್ದು ಖಂಡನೀಯ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ದೇಶದ ಜನರ ಕ್ಷಮೆಯಾಚಿಸಿ ನೈತಿಕ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಅಮಿತ್ ಶಾ ಹೇಳಿಕೆಗೆ ಖಂಡನೆ; ಸಂವಿಧಾನ ಸಂರಕ್ಷಣಾ ಸಮಿತಿ ಜ.6ರಂದು ಬಂದ್‌ಗೆ ಕರೆ

ಈ ವೇಳೆ ಜಿಲ್ಲಾ ಸಂಘಟನೆ ಸಂಚಾಲಕ ಶರಣು ಶಿಂದೆ, ಪರಶುರಾಮ ದಿಂಡವಾರ, ಲಕ್ಕಪ್ಪ ಬಡಿಗೇರ, ತಾಲೂಕು ಸಂಚಾಲಕ ರಾಜಕುಮಾರ ಸಿಂದಗೇರಿ, ಮುಖಂಡರಾದ ರಾವುತ ಮಾಸ್ತರ ತಳಕೇರಿ, ಬಸವರಾಜ ಇಂಗಳಗಿ, ಪರಶುರಾಮ ಬಡಿಗೇರ, ಪ್ರಕಾಶ ಶಾಂತಗಿರಿ, ಯಮನಪ್ಪ ಭೂತಾಳಿ, ರಮೇಶ ಬನಸೋಡೆ, ರಾಘವೇಂದ್ರ ಪಡಗಾನೂರ, ಪ್ರಕಾಶ ಮಣೂರ, ಸುನೀಲ ಕನಮಡಿ, ಮಹೇಶ ಗುಡಿಮನಿ, ಸುನಂದಾಸೊನ್ನಳ್ಳಿ, ಶಂಕರಗೌಡ, ಹಿರೇಗೌಡ ಸೇರಿದಂತೆ ಸಂಘಟನೆ ಪದಾಧಿಕಾರಿಗಳು, ವಿವಿಧ ಪ್ರಗತಿಪರ ಸಂಘಟನೆಯ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X