ಬೀದರ ಜಿಲ್ಲೆಯ ಔರಾದ, ಕಮಲನಗರ ತಾಲ್ಲೂಕು ಕೈಗಾರಿಕಾ ಪ್ರದೇಶವಾಗಿ ಮಾಡುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ʼಈ ಎರಡು ತಾಲ್ಲೂಕುಗಳಲ್ಲಿ ಕೈಗಾರಿಕಾ ವಲಯ ಸ್ಥಾಪಿಸಿ ಸ್ಥಳೀಯ ನಿರುದ್ಯೋಗ ಯುವಕರಿಗೆ, ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವಂತೆ ಕಳೆದ 2014ರಿಂದ ನಿರಂತರವಾಗಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತಿದ್ದೇನೆ. ಆದರೆ ಯಾವ ಸರ್ಕರವೂ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಇದೇ ಡಿ.19ರಂದು ಬೆಂಗಳೂರಿನ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆʼ ಎಂದು ತಿಳಿಸಿದ್ದಾರೆ.
ʼಡಾ.ಎಂ. ನಂಜುಂಡಪ್ಪ ವರದಿ ಪ್ರಕಾರ ಔರಾದ್ ಹಾಗೂ ಕಮಲನಗರ ಅತ್ಯಂತ ಹಿಂದುಳಿದ ತಾಲ್ಲೂಕು ವ್ಯಾಪ್ತಿಗೆ ಬರುತ್ತವೆ. ಇಲ್ಲಿಯ ಜನರು ಗುಳೆ ಹೋಗುವುದು ತಪ್ಪಿಸಲು ಹಾಗೂ ಜನರ ಆರ್ಥಿಕ ಜೀವನಮಟ್ಟ ಸುಧಾರಣೆಗೆ ಇಲ್ಲಿ ಕೈಗಾರಿಕಾ ವಲಯ ಸ್ಥಾಪಿಸುವುದು ಅಗತ್ಯವಾಗಿದೆ ಎಂದು ನಂಜುಂಡಪ್ಪ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹೀಗಾಗಿ ನಂಜುಂಡಪ್ಪ ವರದಿ ಪ್ರಕಾರ ಈ ತಾಲ್ಲೂಕುಗಳಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸಿ, ಈ ಭಾಗದ ಉದ್ಯಮಿಗಳಿಗೆ, ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕುʼ ಎಂದು ಮನವಿ ಮಾಡಿದ್ದಾರೆ.