- 15 ದಿನಗಳೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಸೂಚನೆ
- ಮಾರ್ಗಸೂಚಿಯ ಷರತ್ತಿನಂತೆ ವರ್ಗಾವಣೆ ಕೈಗೊಳ್ಳಲು ಕ್ರಮ
ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಮಾರ್ಗಸೂಚಿ ಅನುಸಾರ ಷರತ್ತುಗಳಿಗೆ ಒಳಪಟ್ಟು ವರ್ಗಾವಣೆ ಮಾಡಲು ಆಯಾಯ ಇಲಾಖೆ ಸಚಿವರಿಗೆ ಅವಕಾಶ ಕಲ್ಪಿಸಿದೆ.
ಸರ್ಕಾರದ ಆದೇಶ ಈ ಕೆಳಗಿನಂತಿದೆ:
ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾಡಲಾಗುತ್ತದೆ. ಇದರ ಸಲುವಾಗಿ ಸರ್ಕಾರಿ ವಿಸ್ತ್ರತವಾದ ಮಾರ್ಗಸೂಚಿ ನೀಡಿದೆ. ಈ ಮಾರ್ಗಸೂಚಿ ಪ್ರಕಾರ ಷರತ್ತುಗಳಿಗೊಳಪಟ್ಟು ನೌಕರರ ವರ್ಗಾವಣೆ ಮಾಡಬಹುದಾಗಿದೆ ಎಂದು ತಿಳಿಸಲಾಗಿದೆ.
ಮುಂದುವರೆದಂತೆ 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರನ್ನು ಮೀರದಂತೆ ವರ್ಗಾವಣೆ ಮಾಡಬಹುದಾಗಿದೆ. ಈ ರೀತಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ?:ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಗ್ಯಾರಂಟಿ ಖಾತರಿ ಬಗ್ಗೆ ಹೇಳಲಿ: ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ
ಈ ಹಿನ್ನೆಲೆಯಲ್ಲಿ ದಿನಾಂಕ: 01.06.2023 ರಿಂದ ದಿನಾಂಕ: 15.06.2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.