13 ವರ್ಷದ ಅಪ್ತಾಪ್ತ ಬಾಲಕಿಯ ಮೆಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ನಿರಂತರವಾಗಿ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ಗರ್ಭಿಣಿಯಾಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ.
ಹಲವು ತಿಂಗಳುಗಳಿಂದ ತನ್ನ ತಂದೆ, ಚಿಕ್ಕಪ್ಪ ಹಾಗೂ ಅಜ್ಜ ತನ್ನ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆ ಎರಡು ತಿಂಗಳ ಗರ್ಭಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಬಿಧುನಾ ಪೊಲೀಸ್ ಠಾಣೆಯ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 64(F) (ಸಂಬಂಧಿ ಅಥವಾ ಪೋಷಕರಿಂದ ಅತ್ಯಾಚಾರ), 65(1) (16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ), 232 (ಸುಳ್ಳು ಸಾಕ್ಷ್ಯವನ್ನು ನೀಡುವಂತೆ ವ್ಯಕ್ತಿಯನ್ನು ಬೆದರಿಸುವುದು) ಹಾಗೂ ಪೋಕ್ಸೋ ಕಾಯ್ಡಯಡಿಎಫ್ಐಆರ್ ದಾಖಲಿಸಲಾಗಿದೆ ಎಂದು ಔರೈಯಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಅಲೋಕ್ ಮಿಶ್ರಾ ತಿಳಿಸಿದ್ದಾರೆ.
ಬಾಲಕಿಯು ತನ್ನ ಸಂಬಂಧಿಯೊಂದಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಮಿಶ್ರಾ ತಿಳಿಸಿದ್ದಾರೆ.
ಜಗತ್ತು ಕಾಣದ ದುಷ್ಟ ಕೃತ್ಯ,, ಎಲ್ಲವೂ ಇಲ್ಲಿದೆ.