ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ಬಂದ್‌ಗೆ ಕರೆ ನೀಡಿರುವ ರೈತರು ಸೋಮವಾರ ರಾಜ್ಯಾದ್ಯಂತ ಹಲವೆಡೆ ರೈತರು ರಸ್ತೆ ತಡೆ ನಡೆಸಿದ್ದಾರೆ.
ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು.
ಇದನ್ನು ಓದಿದ್ದೀರಾ? ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿರುವ ರೈತ ಸಂಘಟನೆಗಳು: ಫಲ ನೀಡದ ಕೇಂದ್ರದೊಂದಿಗಿನ ಮಾತುಕತೆ
ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಬಂದ್ ನಡೆಯಲಿದೆ. ಧರೇರಿ ಜತ್ತನ್ ಟೋಲ್ ಪ್ಲಾಜಾದಲ್ಲಿ ರೈತರು ಧರಣಿ ಕುಳಿತಿದ್ದು ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿದೆ ಎಂದು ವರದಿಯಾಗಿದೆ.
ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ಬಟಿಂಡಾದ ರಾಂಪುರ ಫುಲ್‌ನಲ್ಲಿ ರಸ್ತೆ ತಡೆ ನಡೆಸಿದರು. ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ.
“ಬೆಳಿಗ್ಗೆ 7ರಿಂದ ಸಂಜೆ 4 ರವರೆಗೆ ಬಂದ್ ಆಚರಿಸಲಾಗುತ್ತದೆ. ಆದರೆ ತುರ್ತು ಸೇವೆಗಳು ಎಂದಿನಂತೆ ಇರಲಿದೆ. ವಿಮಾನ ನಿಲ್ದಾಣಕ್ಕೆ, ಉದ್ಯೋಗ ಸಂದರ್ಶನಕ್ಕೆ, ವಿವಾಹಕ್ಕೆ ಹಾಜರಾಗುವವರಿಗೆ ವಿನಾಯಿತಿಯಿದೆ. ಎಲ್ಲಾ ಈ ವಿಷಯಗಳನ್ನು ನಮ್ಮ ಬಂದ್ ಕರೆಯಿಂದ ಹೊರಗಿಡಲಾಗಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ರೈತ ಹೋರಾಟ | ದೆಹಲಿ ಚಲೋ ಬೆನ್ನಲ್ಲೇ ಗ್ರಾಮೀಣ ಭಾರತ್ ಬಂದ್‌ಗೆ ಸಿದ್ಧತೆ
ಈ ನಡುವೆ 70 ವರ್ಷ ವಯಸ್ಸಿನ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ ಸೋಮವಾರ 35 ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಈವರೆಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ.
Amid the #Punjab Bandh , farmers are also serving Tea to the travellers stuck in the way. Visuals from Mohali pic.twitter.com/CiwbfMRkeK
— Akashdeep Thind (@thind_akashdeep) December 30, 2024
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕಾನೂನುಬದ್ಧವಾಗಿ ಖಾತರಿಪಡಿಸುವಂತೆ ಒತ್ತಾಯಿಸಿ ನೂರಾರು ರೈತರು ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡುವವರೆಗೂ ಉಪವಾಸ ಮುರಿಯುವುದಿಲ್ಲ ಎಂದು ದಲ್ಲೆವಾಲ್ ಹೇಳಿದ್ದಾರೆ.
