ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಲಕ್ನೋದ ಅಧಿಕೃತ ನಿವಾಸದ ಅಡಿಯಲ್ಲಿ ಹಿಂದೂ ದೇವರು ಶಿವನನ್ನು ಪ್ರತಿನಿಧಿಸುವ ಶಿವಲಿಂಗವಿದೆ. ಅಲ್ಲಿಯೂ ಅಗೆಯಿರಿ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.
ಸಂಭಲ್ ಸೇರಿದಂತೆ ಹಲವೆಡೆ ಸಮೀಕ್ಷೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, “ಬಿಜೆಪಿ ಸರ್ಕಾರವು ತನ್ನ ವೈಫಲ್ಯವನ್ನು ಮರೆಮಾಚಲು ಮತ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ವಿವಿಧ ಸ್ಥಳಗಳಲ್ಲಿ ಭೂಶೋಧನೆ ಮಾಡುತ್ತಿದೆ” ಎಂದು ಆರೋಪಿಸಿದರು.
ಇದನ್ನು ಓದಿದ್ದೀರಾ? ಮೀರತ್ ಹೆಲಿಕಾಪ್ಟರ್ ‘ಕಳ್ಳತನ’ ಆರೋಪ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ
“ಮುಖ್ಯಮಂತ್ರಿಯವರ ನಿವಾಸದ ಕೆಳಗೆ ಶಿವಲಿಂಗವಿದೆ ಎಂದು ನಾವು ನಂಬುತ್ತೇವೆ. ಅಲ್ಲಿಯೂ ಭೂಶೋಧನೆ ಮಾಡಲಿ” ಎಂದು ಅಖಿಲೇಶ್ ಯಾದವ್, “ಬುಲ್ಡೋಜರ್‌ಗಳಿಂದ ಅಮಾಯಕರ ಮನೆಗಳನ್ನು ಅಕ್ರಮವಾಗಿ ಕೆಡವಲಾಗುತ್ತಿದೆ” ಎಂದು ಆರೋಪಿಸಿದರು.
ಹಾಗೆಯೇ, “ಇದು ಅಭಿವೃದ್ಧಿಯಲ್ಲ ಆದರೆ ವಿನಾಶ. ಮುಖ್ಯಮಂತ್ರಿಯ ಕೈಯಲ್ಲಿ ಅಭಿವೃದ್ಧಿಯ ರೇಖೆಯಿಲ್ಲ, ವಿನಾಶದ ರೇಖೆ ಇದೆ” ಎಂದರು.
ಅಖಿಲೇಶ್ ಯಾದವ್‌ಗೆ ಬಿಜೆಪಿ ಪ್ರತಿಕ್ರಿಯೆ
ಇನ್ನು ಅಖಿಲೇಶ್ ಯಾದವ್‌ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದೆ. ಅಖಿಲೇಶ್ ಯಾದವ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ, “ಸಂಭಲ್‌ನಲ್ಲಿ ಭೂಶೋಧನೆ ಮಾಡುವುದಿಂದ ಅವರಿಗೆ ಏನು ಸಮಸ್ಯೆ ಇದೆ” ಎಂದು ಪ್ರಶ್ನಿಸಿದರು.
ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ಅಖಿಲೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮತ ಬ್ಯಾಂಕ್‌ಗಾಗಿ ಶಿವಲಿಂಗದ ಅಪಹಾಸ್ಯ ಮಾಡಲಾಗುತ್ತಿದೆ ಎಂದು ದೂರಿದರು.
