ಹಾಸನ | ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಲಿಂಕ್, ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆ!

Date:

Advertisements

ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆಯಿಂದ ಇರುವಂತೆ ಹಾಸನ ಜಿಲ್ಲಾ ಪೊಲೀಸ್‌ ಇಲಾಖೆ ಸೂಚನೆ ನೀಡಿದೆ.

ಈ ಕುರಿತು ಹಾಸನ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದು, “2025ನೇ ಹೊಸವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್ ಅಪರಾಧಿಗಳು ಸಾರ್ವಜನಿಕ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಹ್ಯಾಕ್ ಮಾಡುವ ಸಾದ್ಯತೆ ಇರುತ್ತದೆ. ಬಳಿಕ ಹ್ಯಾಕ್ ಮಾಡಿದ ಮೊಬೈಲ್ ಮೂಲಕ ಸಾರ್ವಜನಿಕ ಜಾಲತಾಣಗಳನ್ನು ಬಳಸಿ ಹಾನಿಕಾರಕ ಲಿಂಕ್ ಹಾಗೂ ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.‌

ಪೊಲೀಸ್‌ ಪ್ರಕಟಣೆ

“ಸಾರ್ವಜನಿಕರು ಈ ರೀತಿಯ ಲಿಂಕ್‌ಗಳು ಹಾಗೂ ಎಪಿಕೆ ಫೈಲ್‌ಗಳನ್ನು ಹೊಸ ವರ್ಷದ ಶುಭಾಷಯಗಳ ಲಿಂಕ್‌ ಜತೆಗೆ ಸ್ವೀಕರಿಸಿಕೊಂಡಲ್ಲಿ ಅವುಗಳನ್ನು ಕೂಡಲೇ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಸದರಿ ಹಾನಿಕಾರಕ ಲಿಂಕ್‌ ಮತ್ತು ಎಪಿಕೆ ಫೈಲ್‌ಗಳನ್ನು ಯಾರೊಬ್ಬರಿಗೂ ಶೇರ್‌ ಮಾಡದಿರಿ. ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾವುದಾದರೂ ವಾಟ್ಸ್ಯಾಪ್ ಗ್ರೂಪ್‌ಗಳಿಗೆ ನಿಮ್ಮ ಪರಿಚಿತ ವಾಟ್ಸ್ಯಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದ್ದಲ್ಲಿ ಸದರಿ ಗುಂಪಿನ ಅಡ್ಮಿನ್‌ಗಳು ಅಂತಹ ಸಂದೇಶಗಳನ್ನು ಪರಿಶೀಲನೆ ಮಾಡಿ ಡಿಲೀಟ್‌ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಕೋರ್ಟ್ ವಿಚಾರಣೆಗೆ ಆಗಮಿಸುತ್ತಿದ್ದವರ ಮೇಲೆ ಸಿನೀಮಿಯ ಶೈಲಿಯಲ್ಲಿ ದಾಳಿ

ಯಾವುದೇ ರೀತಿಯ ಸೈಬರ್‌ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930ಗೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್‌ಸೈಟ್‌ನಲ್ಲಿ ದೂರು ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X