ಕಲಬುರಗಿ | ‌ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸಲ್ಲ : ಅಜಯ್‌ ಸಿಂಗ್‌

Date:

Advertisements

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೇಳುತ್ತಿರುವುದು ಸಮಂಜಸವಲ್ಲ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್‌ ಸಿಂಗ್‌ ಹೇಳಿದ್ದಾರೆ.

ʼಗುತ್ತಿಗೆದಾರ ಸಚಿನ್‌ ಪಾಂಚಾಳ್ ಡೆತ್‌ನೋಟ್‌ನಲ್ಲಿ ಪ್ರಿಯಾಂಕ್‌ ಖರ್ಗೆ ಹೆಸರು ಪ್ರಸ್ತಾಪವಾಗಿಲ್ಲ, ಹೀಗಾಗಿ ಅವರು ಯಾವ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲʼ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಪಾಂಚಾಳ್‌ಗೂ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವೇ ಇಲ್ಲ. ಅವರ ಆಪ್ತರೆಂದು ಹೆಸರು ಪ್ರಸ್ತಾಪಿಸುತ್ತ ಬಿಜೆಪಿ ವಿನಾಕಾರಣ ಟೀಕಿಸುತ್ತಿದೆ. ಶಾಸಕರು, ಸಚಿವರಿಗೆ ಎಲ್ಲರೂ ಆಪ್ತರೆ ಇರುತ್ತಾರೆ. ಹಾಗಂತ ಯಾವುದೋ ಪ್ರಕರಣದಲ್ಲಿ ಅವರ ಹೆಸರು ಹೇಳಿ ರಾಜೀನಾಮೆ ಕೇಳೋದು ಸಮಂಜಸವೆʼ ಎಂದು ಪ್ರಶ್ನಿಸಿದರು.

Advertisements

ʼಇಡೀ ಕಾಂಗ್ರೆಸ್ ಪಕ್ಷ, ಹಿಂದುಳಿದ ವರ್ಗ ಪ್ರಿಯಾಂಕ ಖರ್ಗೆ ಬೆಂಬಲಕ್ಕಿದೆ. ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೇಳುತ್ತಿರುವುದರ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ನುಡಿದಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಜೊತೆಗೆ ಅಭಿವೃದ್ಧಿಯೂ ನಿರಂತರವಾಗಿ ಸಾಗಿದೆ. ಇದೆಲ್ಲವನ್ನು ಕಂಡು ಬಿಜೆಪಿ ಹೊಟ್ಟೆಕಿಚ್ಚು ಪಡುತ್ತಿದೆ. ಹೀಗಾಗಿ ಅವರಿಗೆ ಏನಾದರೂ ಮಾಡಿ ಗೊಂದಲ ಹುಟ್ಟು ಹಾಕಬೇಕೆಂದು ಇಂತಹ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯ ಇಂತಹ ಅರ್ಥ ರಹಿತ ಆಗ್ರಹಗಳಿಗೆ ಜನಬೆಂಬಲವೂ ಇರುವುದಿಲ್ಲʼ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಹೊಸ ವರ್ಷಾಚರಣೆ : ಶುಭ ಕೋರುವ APK ಫೈಲ್ ಕ್ಲಿಕ್ಕಿಸಬೇಡಿ : ಎಸ್ಪಿ ಪ್ರದೀಪ್ ಗುಂಟಿ

ʼಸಂಬಂಧವಿಲ್ಲದ ಸಂಗತಿಗಳನ್ನೇ ಮುಂದಿಟ್ಟುಕೊಂಡು ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೇಳುತ್ತಿರುವುದರ ಹಿಂದೆ ಅವರನ್ನು ಟಾರ್ಗೆಟ್ ಮಾಡಿ ರಾಜಕೀಯ ಮಾಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಇದು ಜನರಿಗೂ ಗೊತ್ತಾಗಿದೆ. ಮಾತೆತ್ತಿದರೆ ಅವರಿವರ ರಾಜೀನಾಮೆ ಕೇಳಿದರೆ ಕೊಡಲಿಕ್ಕೇನು ಮಕ್ಕಳಾಟವೆ? ಬಿಜೆಪಿ ಮುಖಂಡರು ಇಂತಹ ಆಗ್ರಹ ಮಾಡುವ ಮುನ್ನ ಸರಿಯಾಗಿ ಎರಡೆರಡು ಬಾರಿ ಯೋಚಿಸಿ ಹೇಳಿಕೆ ನೀಡಬೇಕು‌ʼ ಎಂದು ಅಜಯ್‌ ಸಿಂಗ್‌ ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X