ಜೀವನದ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಹಗ್ಗ ತುಂಡಾಗಿ ಮನೆಯ ಮೊದಲ ಅಂತಸ್ತಿನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ 80ನೇ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.
ಮನೆಯ ಮೊದಲ ಅಂತಸ್ತಿನಿ ಮೇಲ್ಛಾವಣಿಯ ಕಬ್ಬಿಣದ ಅಡ್ಡಪಟ್ಟಿಗೆ ನೇಣುಬೀಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ನೇಣುಕುಣಿಕೆಯಲ್ಲಿ ನರಳಾಡುತ್ತಿದ್ದಾಗ, ದೇಹದ ಭಾರ ನಿಯಂತ್ರಣಕ್ಕೆ ಸಿಗದೆ, ಹಗ್ಗವು ತುಂಡಾದ ಪರಿಣಾಮ, 20 ಅಡಿಗಿಂತಲೂ ಅಧಿಕ ಎತ್ತರದಿಂದ ಮನೆಯ ಹೊರಾಂಗಣಕ್ಕೆ ಬಿದ್ದಿದ್ದಾರೆ. ತಲೆ ಭಾಗಕ್ಕೆ ಗಂಭೀರ ಗಾಯವಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯು ಮೆಲ್ರಾಯ್(55) ಎಂದು ತಿಳಿದುಬಂದಿದೆ. ಮಣಿಪಾಲ ಪೊಲೀಸ್ ಠಾಣೆಯ ಪಿಎಸ್‌ಐ ಅನಿಲ್ ಕುಮಾರ್, ಎಎಸ್‌ಐ ನಾಗೇಶ್ ನಾಯ್ಕ್, ಸಿಬ್ಬಂದಿ ವಿದ್ಯಾ ಘಟನಾ ಸ್ಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ವಿಧಿವಿಜ್ಞಾನ ತಜ್ಞರಾದ ಪ್ರಸನ್ನ, ಲಾವಣ್ಯ, ಹರೀಶ್ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮಣಿಪಾಲ ಆಸ್ಪತ್ರೆಯ ವೈದಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸುವಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ರಸ್ತೆಯಲ್ಲಿ ತಲೆಬುರಡೆ, ಎಲುಬುಗಳನ್ನಿಟ್ಟು ಮೌಢ್ಯಾಚರಣೆ; ಸಾರ್ವಜನಿಕರಲ್ಲಿ ಆತಂಕ
ಮೃತರು ತಮ್ಮ ಮರಣಾನಂತರ ನವದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ, ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಗೆ ಅಂಗಾಂಗ ದಾನ ಮಾಡಲು 2018ರಲ್ಲಿ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಅಂಗಾಗ ದಾನ ಪ್ರತಿಜ್ಞಾ ಪತ್ರವನ್ನು ಪಡೆದಿದ್ದರು. ಸ್ಥಳದಲ್ಲಿ ಲಭ್ಯವಾಗಿರುವ ದಾನ ಪತ್ರದಲ್ಲಿ ಯಕೃತ್, ಕರುಳು, ಕಣ್ಣಿನ ಚೆಂಡುಗಳು, ಚರ್ಮ, ಮೂಳೆಗಳು, ಹೃದಯ ಕವಾಟಗಳು, ರಕ್ತನಾಳಗಳನ್ನು ದಾನ ನೀಡುವ ಉಲ್ಲೇಖಗಳಿದ್ದವು.
