- ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ರೈತ ಮುಖಂಡರು
- ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದ ಸಿದ್ದರಾಮಯ್ಯ
ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು (ಮೇ31) ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದ ಅವರು, ರೈತರನ್ನೂ ಒಳಗೊಂಡಂತೆ ಹಲವರಿಂದ ಅಹವಾಲು ಸ್ವೀಕರಿಸಿದರು.
ಅದರಲ್ಲೂ ರಾಗಿ ಬೆಳೆಗೆ ಬೆಂಬಲ ಬೆಲೆ ಕೊಡಿಸುವ ವಿಚಾರದಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸಿದ್ದನ್ನು ಪ್ರಶ್ನಿಸಿದ ಸಿಎಂ, ನಿಧಾನಗತಿಯ ಕಾರ್ಯವೈಖರಿಗೆ ಬಗ್ಗೆ ತರಾಟೆಗೆತ್ತಿಕೊಂಡರು. ಬಳಿಕ ಈ ಕುರಿತು ಶೀಘ್ರ ವರದಿ ಸಲ್ಲಿಸುವಂತೆ ತಾಕೀತು ಮಾಡಿದರು.
ಈ ಸುದ್ದಿ ಓದಿದ್ದೀರಾ?:ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಆದೇಶ
ಬಳಿಕ ತಮಗೆ ದೂರು ಸಲ್ಲಿಸಿದ ರೈತರಿಗೆ ಭರವಸೆ ನೀಡಿದ ಸಿದ್ದರಾಮಯ್ಯ ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.