ವಿದ್ಯಾರ್ಥಿಗಳ ಹಳೆಯ ಬಸ್‌ ಪಾಸ್‌ ಅವಧಿ ವಿಸ್ತರಣೆ: ಕೆಎಸ್‌ಆರ್‌ಟಿಸಿ

Date:

Advertisements
  • ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದು
  • ಜೂನ್‌ 15ರವರೆಗೆ ಹಳೆಯ ಬಸ್‌ ಪಾಸ್‌ಗಳ ವಿಸ್ತರಣೆ

ಬೇಸಿಗೆ ರಜೆ ಕಳೆದು 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ಹಿನ್ನೆಲೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿಗಳ ಹಳೆಯ ಬಸ್‌ ಪಾಸ್‌ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಕೆಎಸ್‌ಆರ್‌ಟಿಸಿ, “ಮೇ 31ರಂದು ನಿಗಮ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಹಳೆಯ ಬಸ್‌ ಪಾಸ್‌ಗಳನ್ನು ಜೂನ್‌ 15ರವರೆಗೆ ವಿಸ್ತರಣೆ ಮಾಡಿದೆ” ಎಂದಿದೆ.

“ವಿದ್ಯಾರ್ಥಿಗಳು 2022-23ನೇ ಸಾಲಿನ ಹಳೆಯ ಬಸ್‌ಪಾಸ್‌ಗಳನ್ನು ನಿರ್ವಾಹಕರಿಗೆ ತೋರಿಸಿ ಬಸ್‌ನಲ್ಲಿ ಪ್ರಯಾಣ ಮಾಡಬಹುದು ಅಥವಾ ಒಂದು ವೇಳೆ ಪಾಸ್‌ ಇಲ್ಲದಿದ್ದರೇ, ಪ್ರಸಕ್ತ ವರ್ಷ ಶಾಲೆಗೆ ದಾಖಲಾದ ಶುಲ್ಕ ಪಾವತಿ ರಸೀದಿ ತೋರಿಸಿ ಪ್ರಯಾಣ ಮಾಡಬಹುದಾಗಿದೆ” ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡೆತ್‌ನೋಟ್‌ ಬರೆದಿಟ್ಟು, ಟವೆಲ್‌ನಿಂದ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

“ಜೂನ್‌ 15ರವರೆಗೆ ವಿದ್ಯಾರ್ಥಿಗಳು ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದು ” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X