ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ.
ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದೆಯೂ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ವರಿಸಲಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಶಿವಶ್ರೀ ಸ್ಕಂದಪ್ರಸಾದ್, ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.
ಶಿವಶ್ರೀ ಸ್ಕಂದ ಪ್ರಸಾದ್ ಅವರು ಕರ್ನಾಟಕ ಸಂಗೀತ ಗಾಯಕಿ ಮತ್ತು ಭರತನಾಟ್ಯ ಕಲಾವಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ
ಪೊನ್ನಿಯನ್ ಸೆಲ್ವನ್ – ಭಾಗ 2 ರ ಕನ್ನಡ ಆವೃತ್ತಿಯಲ್ಲಿ ಹಾಡನ್ನೂ ಇವರು ಹಾಡಿದ್ದಾರೆ. ಶಿವಶ್ರೀ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.
2025 ರ ಮಾರ್ಚ್‌ನಲ್ಲಿ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ ವಿವಾಹ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಪಾಪ ಆ ಕಲಾವಿದೆ,,