ನಾಡಿನ ಬಹುಸಂಖ್ಯಾತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಎಲ್ಲ ಜಾತಿಯ ಬಡವರ ಸುಖ-ದುಃಖಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯವನ್ನು ಕೊಡಿಸಬೇಕೆಂಬ ನಿಟ್ಟಿನಲ್ಲಿ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ರಾಜ್ಯಾದ್ಯಂತ ಹಲವು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಸೇನೆ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ಛಲವಾದಿ, ರಾಷ್ಟ್ರೀಯ ಉಪಾಧ್ಯಕ್ಷ ಅರ್ಮನ್ ಎ ಮತ್ತು ರಾಜ್ಯಾಧ್ಯಕ್ಷ ವಿಶ್ವನಾಥ್ ಪೂಜಾರಿ ಎಸ್ ಅವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರ ನೇಮಕ ನಡೆದಿದ್ದು, “ತತ್ವ ಸಿಂದ್ಧಾಂತಗಳಡಿಯಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಆಯ್ಕೆ ನಡೆದಿದೆ.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ನಡೆದ ʼಕಂಪ್ಲಿ ಬಂದ್ʼ ಸಂಪೂರ್ಣ ಯಶಸ್ವಿ
ಶಿವಮೊಗ್ಗ ಗ್ರಾಮಾತರ ಅಧ್ಯಕ್ಷರಾಗಿ ದಂಡಪಾಣಿ ಎಸ್, ಹಾಸನ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಮುಬಾರಕ್ ಪಾಷಾ, ಶಿವಮೊಗ್ಗ ತಾಲೂಕು ಅಧ್ಯಕ್ಷರಾಗಿ ಶಿವು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಎಚ್ ಎಸ್ ಗೋಪಾಲ್, ಹಾವೇರಿ ಜಿಲ್ಲಾಧ್ಯಕ್ಷರಾಗಿ ಹಜರತ್ ಅಲಿ, ಧಾರವಾಡ ಜಿಲ್ಲಾಧ್ಯಕ್ಷರಾಗಿ ಪರಶುರಾಮ್, ಬಿಜಾಪುರ ಜಿಲ್ಲಾಧ್ಯಕ್ಷರಾಗಿ ಶರಣಬಸು ಹರಿಜನ ಎಂಬುವವರನ್ನು ಆಯ್ಕೆ ಮಾಡುವ ಮೂಲಕ ನೇಮಕ ಮಾಡಿದ್ದಾರೆ.