ಹೊಸ ವರ್ಷಾಚರಣೆ: ರಾಜ್ಯ ಅಬಕಾರಿ ಇಲಾಖೆಗೆ ಅರ್ಧ ದಿನದಲ್ಲಿ ನೂರಾರು ಕೋಟಿ ರೂ.ಆದಾಯ

Date:

Advertisements

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದಲ್ಲಿ ಕೆಎಸ್​ಬಿಸಿಎಲ್​ನಿಂದ ಬರೋಬ್ಬರಿ 308 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ.

ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ. ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. 2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಕೆಎಸ್​ಬಿಸಿಎಲ್​​ನಿಂದ ಮದ್ಯ ಖರೀದಿ ಮಾಡಿದ್ದಾರೆ.

ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ‌ಆದಾಯ ಸಂಗ್ರಹವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

27-12-2024 ರ ಶುಕ್ರವಾರದಂದು ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.

ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ ಸಂಭ್ರಮದಿಂದ ನಡೆದಿದೆ. ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಮಂದಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಒಟ್ಟಾರೆಯಾಗಿ ಹೊಸ ವರ್ಷದ ಸ್ವಾಗತ, ಸಂಭ್ರಮಾಚರಣೆ ಶಾಂತಿಯುತವಾಗಿ ನೆರವೇರಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X