ಮುಂಬೈಯಿಂದ ಎರ್ನಾಕುಲಂಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು, ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮಹಿಳೆ ಮಗನೊಂದಿಗೆ ಮುಂಬೈಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ.
ಪ್ರಯಾಣದ ಹಾದಿಯಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು, ಆರೋಗ್ಯ ಸ್ಥಿತಿಯನ್ನು ಅರಿತು, ಕೃತಕ ಉಸಿರಾಟದ ವ್ಯವಸ್ಥೆಗೊಳಿಸಿದ್ದರು. ರೈಲ್ವೆ ವೈದ್ಯಾಧಿಕಾರಿ ಡಾ. ಸ್ಟಿವನ್ ಜಾರ್ಜ್ ಅವರು, ಇಂದ್ರಾಳಿ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಪಡೆದಾಗ, ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಗೊಳಿಸಿದರು. ಪರೀಕ್ಷಿಸಿದ ವೈದ್ಯರು ಮಹಿಳೆ ಮೃತಪಟ್ಟಿರುವುದನ್ನು ದೃಢೀಕರಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಪ್ರತ್ಯೇಕ ಅಪಘಾತ : ಇಬ್ಬರ ಸಾವು
ಏಕನಾಥ್ ಔಷಧಿ ಮಳಿಗೆಯ ಸಿಬ್ಬಂದಿ, ನಿಲ್ದಾಣ ನಿಯಂತ್ರಕ ಬಾನು ಪ್ರಕಾಶ್, ರೈಲ್ವೆ ರಕ್ಷಣಾ ಘಟಕದ ಸುಧೀರ್ ಶೆಟ್ಟಿಯವರು ಒಗ್ಗೂಡಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಬದುಕಿಸುವ ಪ್ರಯತ್ನ ನಡೆಸಿದ್ದರು.
