ಹೊಸವರ್ಷದ ಸಂಭ್ರಮಾಚರಣೆ-2025ಯಲ್ಲಿ ತೊಡಗಿದ್ದ ಯುವಕನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ತಡರಾತ್ರಿ ನಡೆದಿದೆ.
ದಾವಣಗೆರೆಯ ವಿದ್ಯಾನಗರದ ನೂತನ್ ಕಾಲೇಜು ರಸ್ತೆಯಲ್ಲಿ ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಬೈಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರು ಘಟನೆ ನಡೆದಿದೆ.
ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್ ಸಾವನ್ನಪ್ಪಿದ ಯುವಕ. ಮಧ್ಯರಾತ್ರಿ 1ರ ಸುಮಾರಿಗೆ ಕಾರ್ತಿಕ್ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ತಿಕ್ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವಿಕಲಚೇತನರ ಬಸ್ ಪಾಸ್ ಗೆ ಶುಲ್ಕ; ಜ.2ರಂದು ಧರಣಿ
ಘಟನೆ ನಡೆಯುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.