ಟಂಟಂಗೆ ಕಬ್ಬಿನ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ-ಮಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.
ಅಯ್ಯಪ್ಪ ಯತ್ನಾಳ (37), ಬಸಮ್ಮ ಚಲವಾದಿ (45) ಮೃತರು. ಅಪಘಾತದಲ್ಲಿ ಬಸವರಾಜ ಯತ್ನಾಳ, ನಿರ್ಮಲ ಯತ್ನಾಳ, ಮಾನಮ್ಮ ಯತ್ನಾಳ, ಮಧು, ಚಂದಪ್ಪ ಚಲವಾದಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಚಿಂಚೋಳಿ ಗ್ರಾಮದ ಸಂಬಂಧಿಕರ ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಭಾಗವಹಿಸಿ ವಾಪಸ್ ಊರಿಗೆ ಟಂಟಂನಲ್ಲಿ ಬರುವಾಗ ಯಡ್ರಾಮಿ ತಾಲ್ಲೂಕಿನ ಸುಂಬಡ ಗ್ರಾಮದ ಇಂದಿರಾ ಗಾಂಧಿ ವಸತಿ ನಿಲಯದ ಹತ್ತಿರ ಕಬ್ಬಿನ ಟ್ಯಾಕ್ಟರ್ ಟಂಟಂಗೆ ಡಿಕ್ಕಿ ಹೊಡೆದು ದುರ್ಘಟನೆ ಜರುಗಿದೆ.
ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.