ಬೆಳಗಾವಿ ಮೂಲದ 19 ವರ್ಷಷ ತುಂಬು ಗರ್ಭಿಣಿಯೊಬ್ಬರು ಡಿಸೆಂಬರ್ 31ಕ್ಕೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದ್ದ ರಾಧಿಕಾ ಆರು ಬಾರಿ ಫಿಟ್ಸ್’ಗೆ ಒಳಗಾಗಿದ್ದರು ಎನ್ನಲಾಗಿದ್ದು, ಇದಲ್ಲದೇ ಗರ್ಭಕೋಶದಲ್ಲಿಯೇ 8 ತಿಂಗಳ ಮಗು ಸಾವನ್ನಪ್ಪಿತ್ತು. ಚಿಕಿತ್ಸೆಗೆ ಫಲಿಸದೆ ರಾಧಿಕಾ ಸಾವಿಗೀಡಾಗಿದ್ದು, ಪತ್ನಿಯ ಸಾವಿನಿಂದ ಮನನೊಂದ ಪತಿ ಮಲ್ಲೇಶ್ ವಿಷಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.