ವಂಚನೆ ಪ್ರಕರಣ | ಎಚ್‌ಡಿಕೆ ಕುಟುಂಬ ತಮಗೆ ಆಪ್ತ ಎಂದು ಹೇಳಿ ಚಿನ್ನ ಪಡೆದಿದ್ದ ಆರೋಪಿ ಐಶ್ವರ್ಯಗೌಡ

Date:

Advertisements

ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು 9 ಕೋಟಿ ರೂ. ಮೌಲ್ಯದ ಚಿನ್ನ ಪಡೆದು ವಂಚಿಸಿದ ಆರೋಪಿ ಐಶ್ವರ್ಯಗೌಡ ಅವರು ತಮಗೆ ಮಾಜಿ ಸಿಎಂ ಕುಮಾರಸ್ವಾಮಿ, ಪತ್ನಿ ಅನಿತಾ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಹತ್ತಿರದ ಪರಿಚಯಸ್ಥರು ಎಂದು ಹೇಳಿಕೊಂಡಿದ್ದಾರೆ.

ಪೊಲೀಸರ ತನಿಖೆಯಲ್ಲಿ ಒಂದೊಂದಾಗಿ ಬೆಳಕಿಗೆ ಬಂದಿದೆ. ಅನಿತಾ ಕುಮಾರಸ್ವಾಮಿ, ನಿಖಿಲ್ ಇಬ್ಬರೂ ಬಹಳಷ್ಟು ಪರಿಚಿತರು. ನಿಮಗೆ ಅವರ ಕಡೆಯಿಂದ ಸಹಾಯ ಬೇಕಿದ್ದರೆ ನನಗೆ ಹೇಳಿ, ನಾನು ಸಹಾಯ ಮಾಡುವೆ ಎಂದು ಐಶ್ವರ್ಯಗೌಡ ಹೇಳಿ ನಮ್ಮನ್ನು ನಂಬಿಸಿ ಹಂತ ಹಂತವಾಗಿ 40 ಲಕ್ಷ ರೂ. ಹಾಗೂ ಪೂರ್ಣಿಮಾ ಬಳಿಯೂ ಹಣ, ಚಿನ್ನ ಪಡೆದಿದ್ದಳು. ಈಗ ಹಣ ವಾಪಸ್ಸು ನೀಡದೇ ಮೋಸ ಮಾಡಿದ್ದಾಳೆ ಎಂದು ಮಂಡ್ಯ ಪೂರ್ವ ಠಾಣೆಯಲ್ಲಿ ರವಿಕುಮಾರ್ ಹಾಗೂ ಪೂರ್ಣಿಮಾ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖವಾಗಿದೆ.

ಅಲ್ಲದೇ ಹಣ ಪಡೆಯುವ ಮುನ್ನ ನಾನು‌ ಡಿ.ಕೆ.ಸುರೇಶ್ ತಂಗಿ ಎಂದು ಐಶ್ವರ್ಯ ಪರಿಚಯ ಮಾಡಿಕೊಂಡ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಮಹಿಳೆಯೊಬ್ಬರಿಗೆ 3.25 ಕೋಟಿ ರೂ ವಂಚಿಸಿರುವ ಪ್ರಕರಣವನ್ನು ತನಿಖೆಯನ್ನು ತೀವ್ರಗೊಳಿಸಿರುವ ರಾಜರಾಜೇಶ್ವರಿನಗರ ಪೊಲೀಸರು, ಸರ್ಚ್ ವಾರೆಂಟ್ ಪಡೆದು ನಿನ್ನೆ ಆರೋಪಿ ಐಶ್ವರ್ಯ ಗೌಡ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisements

3.25 ಕೋಟಿ ರೂ. ಹಾಗೂ 430 ಗ್ರಾಂ ಚಿನ್ನಾಭರಣ ವಂಚಿಸಿರುವುದಾಗಿ ಆರೋಪಿಸಿ ಶಿಲ್ಪಾ ಗೌಡ ಎಂಬವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಐಶ್ವರ್ಯ ಗೌಡ ಮನೆ ಶೋಧಿಸಿ ಮಹತ್ವದ ದಾಖಲಾತಿಗಳನ್ನು ವಶಕ್ಕೆ ಪಡೆದು, ಗುರುವಾರ ವಿಚಾರಣೆಗೆ ಬರುವಂತೆ ತಿಳಿಸಿದ್ದಾರೆ. ಆರ್.ಆರ್.ನಗರದ ಶಿಲ್ಪಾಗೌಡ ಅವರಿಗೆ, ವಂಚನೆ ಎಸಗಿದ ಸ್ಥಳ ತೋರಿಸಬೇಕು, ಸಾಕ್ಷಿದಾರರನ್ನು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಇನ್ನೆರಡು ದಿನದೊಳಗೆ ಬಂದು ಹಾಜರುಪಡಿಸಲು ಪೊಲೀಸರು ನೋಟಿಸ್ ನೀಡಿದ್ದಾರೆ.

ಹೈಕೋರ್ಟ್ ಮೊರೆ

ವಾರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಎಸ್.ಐತಾಳ್ ಎಂಬವರಿಗೆ 9.82 ಕೋಟಿ ರೂ ಮೌಲ್ಯದ 14.660 ಕೆ.ಜಿ ಚಿನ್ನಾಭರಣ ವಂಚಿಸಿರುವ ಪ್ರಕರಣದಲ್ಲಿ ಚಂದ್ರಾ ಲೇಔಟ್ ಪೊಲೀಸರು, ಐಶ್ವರ್ಯಗೌಡ ಪತಿ ಕೆ.ಎನ್.ಹರೀಶ್ ನನ್ನು ಬಂಧಿಸಿದ್ದರು.
ಇದನ್ನು ಪ್ರಶ್ನಿಸಿ ಐಶ್ವರ್ಯ ದಂಪತಿ ಹೈಕೋರ್ಟ್ ಮೊರೆ ಹೋಗಿದ್ದರು. ಮಂಗಳವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಂಧನಕ್ಕೆ ಸಕಾರಣವನ್ನು ಲಿಖಿತವಾಗಿ ನೀಡದಿದ್ದಕ್ಕೆ ಆಕ್ಷೇಪಿಸಿ ಮಧ್ಯಂತರ ಜಾಮೀನು ನೀಡಿ ಕೂಡಲೇ ಆರೋಪಿತರನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X