ಧಾರವಾಡ, ಕಲಬುರಗಿಗಳಲ್ಲಿ ಶಾಶ್ವತ ಹೈಕೋರ್ಟ್ ಪೀಠಗಳ ಸ್ಥಾಪನೆ ಪ್ರಶ್ನಿಸಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

Date:

Advertisements
  • ಬೆಂಗಳೂರಿನ ವಕೀಲ ಎನ್ ಪಿ ಅಮೃತೇಶ್ 2014ರಲ್ಲಿ ಸಲ್ಲಿಸಿದ್ದ ಪಿಐಎಲ್ ಅರ್ಜಿ
  • ಪೀಠಗಳ ಸ್ಥಾಪನೆಯಿಂದ ಉತ್ತರ ಕರ್ನಾಟಕದ ಜನರ ಮನೆ ಬಾಗಿಲಿಗೆ ನ್ಯಾಯ ಎಂದ ಕೋರ್ಟ್

ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶಾಶ್ವತ ಹೈಕೋರ್ಟ್ ಪೀಠಗಳ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಈ ಎರಡೂ ಪೀಠಗಳಿಂದ ಬಡ ಕ್ಷಕಿದಾರರಿಗೆ ತ್ವರಿತ ನ್ಯಾಯದಾನವಾಗುತ್ತಿದೆ. ವ್ಯಾಜ್ಯ ವೆಚ್ಚ ತಗ್ಗುವ ಜೊತೆಗೆ ಭಾರತೀಯ ಸಂವಿಧಾನದ ಪೀಠಿಕೆಯಲ್ಲಿನ ಉದ್ದೇಶ ಸಾರ್ಥಕವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರಿನ ವಕೀಲ ಎನ್ ಪಿ ಅಮೃತೇಶ್ 2014ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಕೆ ಎಸ್ ಹೇಮಲೇಖಾ ಅವರ ನೇತೃತ್ವದ ವಿಭಾಗೀಯ ಪೀಠವು ವಜಾಗೊಳಿಸಿದೆ.

Advertisements

ನ್ಯಾಯಾಲಯ ತನ್ನ 197 ಪುಟಗಳ ತೀರ್ಪಿನಲ್ಲಿ ಧಾರವಾಡ ಮತ್ತು ಕಲಬುರಗಿ ಪೀಠಗಳ ಸ್ಥಾಪನೆ ಅಗತ್ಯತೆ ಮತ್ತು ಅವುಗಳ ಆರಂಭದಿಂದ ನ್ಯಾಯದಾನದಲ್ಲಿ ಆಗಿರುವ ಬದಲಾವಣೆಗಳು, ಸಾರ್ವಜನಿಕರಿಗೆ ಆಗುವ ಅನುಕೂಲಗಳು ಹೀಗೆ ನಾನಾ ಅಂಶಗಳನ್ನು ಪ್ರಸ್ತಾಪಿಸಿದೆ.

ನ್ಯಾಯಾಲಯ ಅರ್ಜಿದಾರರಿಗೆ ದಂಡ ವಿಧಿಸಲು ಬಯಸಿತ್ತು. ಆದರೆ, ಅರ್ಜಿದಾರರಿಗೆ 62 ವರ್ಷವಾಗಿದ್ದು, ಅವರನ್ನು ಹಿರಿಯ ನಾಗರಿಕರು ಎಂದು ಪರಿಗಣಿಸಲಾಗಿದೆ. ಜೊತೆಗೆ ಅವರು ಹಿಂದೆ ಕೆಲವು ನೈಜ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿರುವುದನ್ನು ಪರಿಗಣಿಸಿ ದಂಡದಿಂದ ವಿನಾಯಿತಿ ನೀಡಲಾಗಿದೆ. ಆದರೆ, ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ವಜಾಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬೆಂಬಲಿಸಿ ಅಯೋಧ್ಯೆಯಲ್ಲಿ ರ‍್ಯಾಲಿ ನಡೆಸಲಿರುವ ಸಂತರು

“ಎಲ್ಲೂ ನ್ಯಾಯ ಸಿಗದಿದ್ದಾಗ ಜನರು ಕೊನೆಯದಾಗಿ ನ್ಯಾಯಾಲಯವೆಂಬ ದೇಗುಲಕ್ಕೆ ಆಗಮಿಸುತ್ತಾರೆ. ಈ ದೇವಾಲಯವನ್ನು ಜಾತಿ, ಧರ್ಮ, ಲಿಂಗ ಅಥವಾ ಜನ್ಮಸ್ಥಳ ಯಾವುದೇ ಭೇದ ಭಾವ ಇಲ್ಲದೆ ಪೂಜಿಸುತ್ತಿದ್ದಾರೆ. ಧಾರವಾಡ ಹಾಗೂ ಕಲಬುರಗಿ ಪೀಠಗಳ ಸ್ಥಾಪನೆಯಿಂದಾಗಿ ಉತ್ತರ ಕರ್ನಾಟಕ ಭಾಗದ ಜನರ ಮನೆ ಬಾಗಿಲಿಗೆ ನ್ಯಾಯ ದೊರಕುತ್ತಿದೆ. ಯುವ ವಕೀಲರಿಗೆ ಉದ್ಯೋಗಾವಕಾಶ ದೊರಕುತ್ತಿದೆ. ಆ ಮೂಲಕ ನ್ಯಾಯದಾನ ವ್ಯವಸ್ಥೆಯ ಉದ್ದೇಶ ಈಡೇರಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಉತ್ತರ ಕರ್ನಾಟಕ ಭಾಗದ ಜನರ ಬಹುವರ್ಷಗಳ ಬೇಡಿಕೆಯಂತೆ ಹೈಕೋರ್ಟ್ ಪೀಠಗಳನ್ನು ಸ್ಥಾಪನೆ ಮಾಡಲಾಗಿದೆ. ಅಂದಿನ ಮುಖ್ಯ ನ್ಯಾಯಮೂರ್ತಿ ಏಳು ಜನರ ಸಮಿತಿಯನ್ನು ರಚಿಸಿದ್ದರು. ಸಮಿತಿಯು ಎಲ್ಲ ಸಾಧಕ ಬಾಧಕ ಪರಿಶೀಲಿಸಿದ ನಂತರ ಪೀಠಗಳ ಸ್ಥಾಪನೆಗೆ ಶಿಫಾರಸು ಮಾಡಿತ್ತು. ಅದರಂತೆ ಮೊದಲು ಸಂಚಾರಿ ಪೀಠಗಳನ್ನು ಸ್ಥಾಪಿಸಿ ಬಳಿಕ ಕಾಯಂ ಪೀಠಗಳನ್ನು ಸ್ಥಾಪನೆ ಮಾಡಲಾಗಿದೆ. ಇದರಿಂದ ಆ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದೆ.

“ಉತ್ತರ ಕರ್ನಾಟಕ ಭಾಗದ ಜನರ ಮನೆ ಬಾಗಿಲಿಗೆ ನ್ಯಾಯಾಲಯ ಬಂದ ಪರಿಣಾಮ ಆ ಭಾಗದ ಜನರಲ್ಲಿ ಕಾನೂನು ಬಗ್ಗೆ ಅರಿವು ಹೆಚ್ಚಾಗಿದೆ. ನ್ಯಾಯಾಲಯದ ಕದತಟ್ಟುವ ಕಕ್ಷಿದಾರರಿಗೆ ತ್ವರಿತ ಹಾಗೂ ಗುಣಮಟ್ಟದ ನ್ಯಾಯ ದೊರಕುತ್ತಿದೆ. ಜನರು ನ್ಯಾಯಾಂಗದ ಮೆಲಿಟ್ಟಿರುವ ವಿಶ್ವಾಸ ವೃದ್ಧಿಯಾಗಿದೆ” ಎಂದೂ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

84 ಸಾವಿರ ಪ್ರಕರಣ ಬಾಕಿ: 2008ರಲ್ಲಿ ಧಾರವಾಡ ಮತ್ತು ಕಲಬುರಗಿ ಪೀಠಗಳು ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಕ್ರಮವಾಗಿ 20,766 ಮತ್ತು 25,606 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅಂತೆಯೇ 2023ರ ಫೆಬ್ರವರಿ 28ರವರೆಗಿನ ಅಂಕಿ ಅಂಶಗಳಂತೆ ಎರಡೂ ಪೀಠಗಳಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಸೇರಿ ಕ್ರಮವಾಗಿ 58,586 ಮತ್ತು 25,606 ಪ್ರಕರಣಗಳು ಒಳಗೊಂಡು ಒಟ್ಟು 84 ಸಾವಿರ ಪ್ರಕರಣಗಳು ಬಾಕಿಯಿವೆ.

ಅಲ್ಲದೇ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಿಗೆ 2008 ರಿಂದ 2023ರವರೆಗೆ ಕ್ರಮವಾಗಿ 148 ಕೋಟಿ ಮತ್ತು 118 ಕೋಟಿ ರೂ. ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ಸುಪ್ರೀಂ ಪೀಠ

“ಸುಪ್ರೀಂ ಕೋರ್ಟ್‌ನಲ್ಲಿ ಅಪಾರ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಇವೆ. ಕೋರ್ಟ್‌ನಲ್ಲಿನ ನ್ಯಾಯಮೂರ್ತಿಗಳ ಪ್ರಮಾಣ/ಮಿತಿ ಹೆಚ್ಚಿಸಲು ಮತ್ತು ಖಾಲಿ ಹುದ್ದೆಗಳನ್ನು ತುಂಬಲು ಶಿಫಾರಸ್ಸು ಮಾಡುವುದಕ್ಕಾಗಿ ಹಾಗೂ ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ಪೀಠಗಳನ್ನು ಆರಂಭಿಸುವುದಕ್ಕೆ ಸಮಯ ಕೂಡಿ ಬಂದಿದೆ” ಎಂದು ಕಾನೂನು ಆಯೋಗವು ತನ್ನ ವರದಿಯಲ್ಲಿ ಉಲ್ಲೇಖಿಸಿರುವ ಅಂಶವನ್ನು ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X