ಕೇಂದ್ರ ಕ್ರೀಡಾ ಇಲಾಖೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪ್ರಕಟಿಸಿದ್ದು, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 2 ಕಂಚಿನ ಪದಕ ಗೆದ್ದ ಶೂಟರ್ ಮನು ಭಾಕರ್ ಹಾಗೂ ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ.
ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಹಾಗೂ ಪ್ಯಾರಾ ಒಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೂ ಖೇಲ್ ರತ್ನ ನೀಡಲಾಗಿದೆ. ಕ್ರೀಡಾ ವಿಭಾಗದ ದೇಶದ ಅತ್ಯುನ್ನತ ಪ್ರಶಸ್ತಿ ಖೇಲ್ ರತ್ನವಾಗಿದ್ದು, ಜನವರಿ 17 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್ ಜೊತೆಯಾದರೆ ಎರಡು ಸ್ಥಳ ನಿಗದಿ!
” ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಹಾಗೂ ಪರಿಶೀಲನೆಯ ನಂತರ ಸರ್ಕಾರವು ಕೆಳಕಂಡ ಕ್ರೀಡಾಪಟುಗಳು, ತರಬೇತುದಾರರು, ವಿವಿಗಳು ಹಾಗೂ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ನಿರ್ಧರಿಸುತ್ತದೆ” ಎಂದು ಕೇಂದ್ರ ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.