ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕೆ ಅಥವಾ ಹೊಸಬರಿಗೆ ಅವಕಾಶ ನೀಡಬೇಕೆ ಎಂಬುದು ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, “ನಾನು ಕೆಪಿಸಿಸಿ ಕಾರ್ಯಾಧ್ಯಕ್ಷನಿದ್ದೇನೆ. ಒಬ್ಬರೇ ಎರಡು ಹುದ್ದೆಯಲ್ಲಿದ್ದರೆ ಜವಾಬ್ದಾರಿ ನಿರ್ವಹಣೆ ಕಷ್ಟವಾಗುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ನಿರ್ಧಾರ ಎಐಸಿಸಿಗೆ ಬಿಟ್ಟಿದ್ದು, ನಮ್ಮ ಹಂತದಲ್ಲಿ ಏನೂ ಇಲ್ಲ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ʼಭೀಮಾ ಕೋರೆಗಾಂವ್ ವಿಜಯʼ ಸ್ಮರಣೆ ನಮ್ಮೆಲ್ಲರ ಕರ್ತವ್ಯ: ಸತೀಶ್ ಅರವಿಂದ್
“ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಅವರನ್ನು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡುವ ಕುರಿತು ಚರ್ಚೆ ನಡೆದಿಲ್ಲ. ಎಲ್ಲರೂ ಚರ್ಚೆ ಮಾಡಿ, ಒಬ್ಬರ ಹೆಸರನ್ನೇ ಕೊಟ್ಟಿದ್ದೇವೆ. ಕಾರ್ಯಕರ್ತರ ಜತೆಗೆ ನಿರಂತರ ಸಂಪರ್ಕ ಹೊಂದಿರಬೇಕು ಎಂಬುದೊಂದೇ ಮಾನದಂಡ” ಎಂದು ಹೇಳಿದ್ದಾರೆ.