‌ಬೆಳಗಾವಿ | ಎ1 ಆರೋಪಿಯನ್ನು ಅದೇ ಕಚೇರಿಯ ಹುದ್ದೆಯಲ್ಲಿ ಮುಂದುವರೆಸಬಾರದು: ಜಗದೀಶ ಶೆಟ್ಟರ್

Date:

Advertisements

ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಅದೇ ಕಚೇರಿಯ ಅದೇ ಹುದ್ದೆಯಲ್ಲಿ ಮುಂದುವರೆಸಬಾರದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ “ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅವರು ನವೆಂಬರ್ 5ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಸಾವಿಗೆ ತಹಶೀಲ್ದಾರ್ ನಾಗರಾಳ, ಅಶೋಕ ಕಬ್ಬಲಿಗೇರ ಹಾಗೂ ಸೋಮು ದೊಡವಾಡೆ ಎಂಬ ವ್ಯಕ್ತಿಗಳೇ ಕಾರಣವೆಂದು ಡೆತ್‌ನೋಟ್ ಬರೆದಿದ್ದರು.‌ ಇದರಲ್ಲಿ ತಹಶೀಲ್ದಾರ್ ಪ್ರಮುಖ(ಎ1) ಆರೋಪಿ. ಹೀಗಿರುವಾಗ ಎ1 ಆರೋಪಿಯನ್ನು ಅದೇ ಕಚೇರಿಯ ಅದೇ ಸ್ಥಾನದಲ್ಲಿ ನೇಮಕ ಮಾಡಿದ್ದರ ಹಿಂದಿನ ಉದ್ದೇಶವೆನು” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‌ಬೆಳಗಾವಿ | ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು: ಸತೀಶ್ ಜಾರಕಿಹೊಳಿ

Advertisements

“ಜಾಮೀನು ಸಿಕ್ಕ ಮಾರನೇ ದಿನವೇ ತಮ್ಮ ಕುರ್ಚಿ ಮೇಲೆ ಬಂದು ಕೂತಿದ್ದರು. ಬಳಿಕ ಜಿಲ್ಲಾಧಿಕಾರಿ ರಜೆ ಮೇಲೆ ಕಳಿಸಿದ್ದರು. ಎರಡು ತಿಂಗಳ ಒಳಗಾಗಿ ಮತ್ತೆ ಅದೇ ಹುದ್ದೆಯನ್ನು ಅವರಿಗೆ ನೀಡಿದ್ದಾರೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಇಂಥ ಸಂದರ್ಭದಲ್ಲಿ ಅವರಿಗೆ ಹುದ್ದೆ ಕೊಡುವ ಅವಶ್ಯಕತೆ ಏನು? ಈ ಕುರಿತು ಮುಖ್ಯಮಂತ್ರಿ, ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆಯಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X