ಸಿಲಿಂಡರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ.
ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಸಟ್ಟು ಕರಕಲಾಗಿ ಇಡೀ ಗುಡಿಸಲೇ ಬೂದಿಯಾಗಿದೆ. ಬಸಯ್ಯ ಹಿರೇಮಠಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು.
ಓದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ
ಸಿಲಿಂಡರ್ ಸ್ಫೋಟದ ವಿಷಯ ತಿಳಿದು ಕೂಲಿಯಿಂದ ವಾಪಸ್ ಬಂದ ಬಸಯ್ಯ ಹಿರೇಮಠ, ಗುಡಿಸಲಿನ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
