ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಚಾಲಕ ತೋರಿದ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಸ್ಲೀಪಿಂಗ್ ಕೋಚ್ ಎಸಿ ಬಸ್ ಸುಮಾರು ಮೂವತ್ತು ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು. ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯ ಎತ್ತಿನಹಳ್ಳದ ಬಳಿ ತೆರಳುತ್ತಿದ್ದ ವೇಳೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇದನ್ನೂ ಓದಿದ್ದೀರಾ?ಹಾಸನ : ಸಾಕ್ಷಿ ಹೇಳಲು ಬಂದಿದ್ದವರ ಮೇಲೆ ನ್ಯಾಯಾಲಯದ ಆವರಣದಲ್ಲೇ ಹಲ್ಲೆ: ಆರೋಪಿ ವಶಕ್ಕೆ
ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಸಿದ ಚಾಲಕ ಯೋಗೀಶ್ ಎಲ್ಲರ ಪ್ರಾಣ ಉಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಅಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಹೋಗಿತ್ತು.
ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರನ್ನೂ ಬದಲಿ ಬಸ್ಸುಗಳಲ್ಲಿ ಕಳುಹಿಸಲಾಗಿದೆ. ಸಕಲೇಶಪುರ ತಾಲೂಕಿನ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
