ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾ ಟಿಂಗ್ ಆರಂಭಿಸಿದ್ದು, ಭೋಜನ ವಿರಾಮಕ್ಕೆ ಅಗ್ರ ಕ್ರಮಾಂಕದ ನಾಲ್ವರ ವಿಕೆಟ್ ಕಳೆದುಕೊಂಡಿದೆ.ಟೀಂ ಇಂಡಿಯಾ 38 ಓವರ್‌ಗಳಲ್ಲಿ 81 ರನ್‌ಗಳಿಗೆ 4 ವಿಕೆಟ್ ಪತನವಾಗಿದೆ
ಜನವರಿ 2ರಂದು ನಡೆದ ಬೆಳವಣಿಗೆಗಳು ನೀಡಿದ ಸುಳಿವಿನಂತೆ ರೋಹಿತ್ ಶರ್ಮಾ ಅವರು ಈ ಪಂದ್ಯ ದಿಂದ ಹಿಂದೆ ಸರಿದಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುವ ಅವಕಾಶ ಪಡೆದಿದ್ದಾರೆ.
ಟಾಸ್ ಗೆದ್ದ ಬುಮ್ರಾ ಮೊದಲು ಬ್ಯಾಟ್ ಆರಂಭಿಸುವ ತೀರ್ಮಾನ ತೆಗೆದುಕೊಂಡರು. ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶುಭ್‌ಮನ್ ಗಿಲ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಂಡ ಕೂಡಿಕೊಂಡಿದ್ದಾರೆ. ಇನ್ನು ರೋಹಿತ್ ಶರ್ಮಾ ಹಾಗೂ ಆಕಾಶ್‌ದೀಪ್ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮತ್ತೆ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ಕೆ ಎಲ್ ರಾಹುಲ್ ಕೇವಲ 4 ರನ್ ಗಳಿಸಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮೆಲ್ಬರ್ನ್ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಕೇವಲ 10 ರನ್ ಗಳಿಸಿ ಸ್ಕಾಟ್ ಬೊಲೆಂಡ್‌ಗೆ ವಿಕೆಟ್ ಒಪ್ಪಿಸಿದರು.
ಈ ಸುದ್ದಿ ಓದಿದ್ದೀರಾ? IND vs AUS | ಶೋಯೆಬ್ ಅಖ್ತರ್ ದಾಖಲೆ ಮುರಿದ ಜಸ್‌ಪ್ರೀತ್ ಬೂಮ್ರಾ
ಜೈಸ್ವಾಲ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ಸಿಕ್ಕ ಜೀವದಾನವನ್ನು ಬಳಸಿಕೊಳ್ಳುವತ್ತ ದಿಟ್ಟ ಹೆಜ್ಜೆಯಿಡಲಾರಂಭಿಸಿದ್ದಾರೆ. ಮೂರನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಅಮೂಲ್ಯ 40 ರನ್‌ಗಳ ಜತೆಯಾಟ ನಿಭಾಯಿಸಿದರು.
ಇನ್ನೇನು ಊಟದ ವಿರಾಮಕ್ಕೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಶುಭ್‌ಮನ್ ಗಿಲ್, ಸ್ಪಿನ್ನರ್ ನೇಥನ್ ಲಯನ್‌ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಗಿಲ್ ವಿಕೆಟ್ ಒಪ್ಪಿಸುವ ಮುನ್ನ 64 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 20 ರನ್ ಗಳಿಸಿದರು. ಪಾನೀಯ ವಿರಾಮದ ವೇಳೆಗೆ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(17) ಕೂಡ ಬೊಲೆಂಡ್ ಬೌಲಿಂಗ್‌ನಲ್ಲಿ ಔಟಾದರು.
ಪಂತ್(14) ಹಾಗೂ ರವೀಂದ್ರ ಜಡೇಜಾ(4 ಕ್ರೀಸ್ ಕಾಯ್ದುಕೊಂಡಿದ್ದಾರೆ.
