ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ.
ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಸೀಲ್ದಾರ್ ನೇತೃತ್ವದ ತಂಡ ಶುಕ್ರವಾರ(ಡಿ.3) ಬೀದರ್ ನಗರಕ್ಕೆ ಆಗಮಿಸಿದ್ದು, ತನಿಖೆ ಶುರುವಾಗಿದೆ.
ನಗರ ಹೊರವಲಯದ ಹಬ್ಸಿ ಕೋಟೆ ಅತಿಥಿ ಗೃಹದಿಂದ ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲಿಂದ ಸಚಿನ್ ಆತ್ಮಹತ್ಯೆ ಮಾಡಿಕೊಂಡ ಹೈದ್ರಾಬಾದ್-ಬೀದರ್ ಮಾರ್ಗದ ರೈಲು ಹಳಿಗೆ ಭೇಟಿ ಕೊಟ್ಟು ಸ್ಥಳ ಮಹಜರು ಮಾಡಲಿದ್ದಾರೆ. ಬಳಿಕ ಸಚಿನ್ ಅವರ ಗ್ರಾಮ ಭಾಲ್ಕಿ ತಾಲ್ಲೂಕಿನ ಕಟ್ಟಿ ತೂಗಾಂವ್‌ಗೆ ತೆರಳಲಿದ್ದಾರೆ. ಅಲ್ಲಿಂದ ಬೀದರ್‌ನ ಗಾಂಧಿ ಗಂಜ್ ಪೊಲೀಸ್ ಠಾಣೆ, ಅನಂತರ ಭಾಲ್ಕಿ ತಾಲ್ಲೂಕಿನ ಧನ್ನೂರ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?
ಗುತ್ತಿಗೆದಾರ ಸಚಿನ್ ಪಾಂಚಾಳ್ ಡಿ.26ರಂದು ಸಚಿನ್ ಪಾಂಚಾಳ್ ಮರಣ ಪತ್ರ ಬರೆದಿಟ್ಟು ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಾಂಗ್ರೆಸ್ ಮುಖಂಡ ರಾಜು ಕಪನೂರ ಸೇರಿದಂತೆ ಇತರೆ ಎಂಟು ಎಂಟು ಜನರ ವಿರುದ್ಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.