ಕರ್ನಾಟಕದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಚಳಿ ಇರಲಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಡಿಸೆಂಬರ್ 4ರಿಂದ 9ರವರೆಗೆ ರಾಜ್ಯದಲ್ಲಿ ಒಳ ಹವೆ ಇರಲಿದೆ. ಮುಂಜಾನೆಯ ಸಮಯದಲ್ಲಿ ಹೆಚ್ಚು ಮಂಜು ಬೀಳಲಿದೆ. ದಟ್ಟ ಹೊಗೆಯಂತೆ ಮಂಜು ಆವರಿಸಿಕೊಳ್ಳಲಿದೆ ಎಂದು ಮಾಹಿತಿ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಚಳಿ ಇರಲಿದ್ದು, ಮುಂದಿನ ಐದಾರು ದಿನಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗುವುದಿಲ್ಲ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27° ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 15° ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ.