ಬೀದರ್‌ | ಅರಣ್ಯ ಇಲಾಖೆ ಕ್ರಮ ಖಂಡಿಸಿ ಅನಿರ್ದಿಷ್ಟಾವಧಿ ಧರಣಿ

Date:

Advertisements

ಬಡ ದಲಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಅರಣ್ಯ ಇಲಾಖೆ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಶುಕ್ರವಾರ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದ್ದಾರೆ.

ʼಸರ್ಕಾರದ ನಿಯಮಾನುಸಾರ ಕಳೆದ 40-50 ವರ್ಷಗಳಿಂದ ಭೂಮಿ ಉಳುಮೆ ಮಾಡಿಕೊಂಡು ಉಪ ಜೀವನ ನಡೆಸುತ್ತಿರುವ ಜಿಲ್ಲೆಯ ದಲಿತ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಕಾರಣ ಕಿರುಕುಳ ನೀಡಿ ರೈತರ ಹೆಸರಿನಲ್ಲಿ ಇರುವ ಪಹಣಿ ಏಕಾಏಕಿ ರದ್ದುಗೊಳಿಸಿ ಅರಣ್ಯ ಇಲಾಖೆ ಎಂದು ನಮೂದಿಸಿದ್ದಾರೆ. ಇದರಿಂದ ಬಡ ರೈತರು ಅನ್ನದಾತರು ಅಕ್ಷರಶಃ ಕಂಗಾಲಾಗಿದ್ದಾರೆʼ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ʼ1978-79ರಿಂದ ದಲಿತ ಸಮುದಾಯದ ರೈತರು ಜಮೀನು ಉಳುಮೆ ಮಾಡುತ್ತಿದ್ದಾರೆ. ಸ್ವತಃ ಸರ್ಕಾರವೇ ಅವರಿಗೆ ಭೂಮಿ ಹಂಚಿಕೆ ಮಾಡಿದೆ. ಹೀಗಿರುವಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಏಕಾಏಕಿ ಒಕ್ಕಲೆಬ್ಬಿಸುತ್ತಿರುವುದು ಎಷ್ಟು ಸರಿ. ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಸಿ ಅಧಿಕೃತವಾಗಿ ಹೋಟೆಲ್‌, ರೇಸ್ಟೊರೆಂಟ್‌, ಶಾಲಾ-ಕಾಲೇಜು, ಶಾಪಿಂಗ್‌ ಮಾಲ್‌ ನಡೆಸುವ ಬಲಾಢ್ಯರ ವಿರುದ್ಧ ಯಾವುದೇ ಕ್ರಮ ಜರುಗಿಸಲು ಮುಂದಾಗುತ್ತಿಲ್ಲʼ ಎಂದು ದೂರಿದರು.

Advertisements

ʼಅಕ್ರಮವಾಗಿ ಸಿ ಮತ್ತು ಡಿ ವರ್ಗದ ಜಮೀನಿನಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಪ್ರಭಾವಿಗಳನ್ನು ರಕ್ಷಿಸಿ ಹಲವು ದಶಕಗಳಿಂದ ಸಾಗುವಳಿ ಮಾಡುತ್ತಿರುವ ಬಡ ರೈತರನ್ನು ಒಕ್ಕಲೆಬ್ಬಿಸಿದ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಯನ್ನು ಅಮಾನತುಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಚಿನ್‌‌ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು

ಪ್ರತಿಭಟನೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ, ಕೆಆರ್‌ಎಸ್ ರಾಜ್ಯ ಸಮಿತಿ ಮುಖಂಡ ತುಕಾರಾಮ ಗೌರೆ, ಭೀಮ್‌ ಟೈಗರ್‌ ಸೇನಾ ಜಿಲ್ಲಾಧ್ಯಕ್ಷ ನರಸಿಂಗ್‌ ಸಾಮ್ರಾಟ್‌, ಭಾರತೀಯ ಜೈಭೀಮ ದಳ ವಿಭಾಗೀಯ ಅಧ್ಯಕ್ಷ ಮಾರುತಿ ಕಂಟಿ, ಕರ್ನಾಟಕ ಕ್ಷತ್ರೀಯ ಒಕ್ಕೂಟ ಉಪಾಧ್ಯಕ್ಷ ರತೀನ ಕಮಲ ಸೇರಿದಂತೆ ಪ್ರಮುಖರಾದ ಮಹೇಶ ಗೊರನಾಳಕರ್‌, ಅವಿನಾಶ ದೀನೆ, ಗೌತಮ ಭೋಸ್ಲೆ, ಕಲ್ಯಾಣರಾವ ಗುನ್ನಳ್ಳಿಕರ್‌, ವಿನೋದಕುಮಾರ್‌, ರಮೇಶ ಮಂದಕನಳ್ಳಿ, ಅಂಬೇಡ್ಕರ್‌ ಸಾಗರ್‌, ಶಿವಕುಮಾರ್‌ ಜೀರ್ಗೆ, ಈಶ್ವರ ಗುತ್ತೆದಾರ, ಧನರಾಜ ದೊಡ್ಡಮನಿ ಹಾಗೂ ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X