ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

Date:

Advertisements
  • ಎಲ್ಲ ಕೆಲಸಗಾರರಿಗೆ ಸಕಾಲದಲ್ಲಿ ಸರಿಯಾದ ಕೂಲಿ ಪಾವತಿಸಿ
  • ಕೆಲಸ ನೀಡದಿದ್ದರೆ ನಿರುದ್ಯೋಗ ಭತ್ಯಯಾದರೂ ನೀಡಬೇಕು

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಜಾರಿಗೆ ಆಗ್ರಹಿಸಿ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಕೂಲಿ ಕಾರ್ಮಿಕರು ಧರಣಿ ನಡೆಸಿದರು.

ಕೂಲಿಕಾರ್ಮಿಕ ಗಿರಿಯಪ್ಪ ಕೋರಿ ಮಾತನಾಡಿ, ಮೇ 5 ರಂದು ಕೆಲಸ ನೀಡಿ ಎಂದು ಗ್ರಾಮ ಪಂಚಾಯಿತಿಗೆ ನೂರಾರು ಮಂದಿ ಅರ್ಜಿ ಸಲ್ಲಿಸಿದ್ದೆವೆ. ಆದರೆ, ಗ್ರಾಮ ಪಂಚಾಯಿತಿಯಿಂದ ಕೆಲಸ ನೀಡಲು ಮುಂದಾಗುತ್ತಿಲ್ಲ. ಹಾಗಾಗಿ ನಿರುದ್ಯೋಗ ಭತ್ಯಯಾದರೂ ನೀಡಬೇಕು ಎಂದು ಆಗ್ರಹಿಸಿದರು.

ಗ್ರಾಮದಲ್ಲಿ ಕೆಲಸವಿಲ್ಲದೆ ಸಮಸ್ಯೆ ಎದರುರಾಗಿದ್ದರಿಂದ ರೈತಾಪಿ ವರ್ಗ ಕಂಗಲಾಗಿದ್ದಾರೆ. ಸರ್ಕಾರ ತಕ್ಷಣವೇ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸದಿದ್ದರೆ ಪ್ರತಿಯೊಬ್ಬರ ಸಂಕಷ್ಟ ಹೆಚ್ಚಾಗಲಿದೆ. ಪ್ರತಿಯೊಂದು ಕುಟುಂಬಕ್ಕೂ ಅವರು ಬಯಸುವಷ್ಟು ದಿನ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಒದಗಿಸಬೇಕು ಎಂದು ಒತ್ತಾಯಿಸಿದರು.

Advertisements

ಎಲ್ಲ ಕೆಲಸಗಾರರಿಗೆ ಸಕಾಲದಲ್ಲಿ ಸರಿಯಾದ ಕೂಲಿ ಪಾವತಿ ಮಾಡಬೇಕು. ಸಕಾಲದಲ್ಲಿ ಉದ್ಯೋಗ ಒದಗಿಸಲಾಗದ ಸಂದರ್ಭಗಳಲ್ಲಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಗ್ರಾಮ ಪಂಚಾಯಿತಿಗೆ ಅಥವಾ ತಾಲೂಕು ಪಂಚಾಯಿತಿಗೆ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಿ ಸ್ವೀಕೃತಿ ಪತ್ರ ನೀಡಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಜನರಿಗೆ ನ್ಯಾಯ ಒದಗಿಸಲು ಮನುಷ್ಯನ ಕಷ್ಟಕ್ಕೆ ಸ್ಪಂದಿಸುವ ಗುಣ ಮುಖ್ಯ; ಸಿಎಂ ಸಿದ್ದರಾಮಯ್ಯ

ವಾರಕ್ಕೊಮ್ಮೆ ಎನ್.ಎಂ.ಆರ್ ಗಳನ್ನು ಮುಕ್ತಾಯಗೊಳಿಸಿ ಕೆಲಸಗಾರರಿಗೆ ಕೂಲಿ ಪಾವತಿ ಮಾಡಬೇಕು. ಕೂಲಿ ಪಾವತಿ ವಿಳಂಬವಾದರೆ 936 ರ ವೇತನ ಪಾವತಿ ಕಾಯ್ದೆಯ ಪ್ರಕಾರ ವಿಳಂಬ ಕೂಲಿ ಪಾವತಿ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿರೇಶ ಪೋಲೀಸ್ ಪಾಟೀಲ್, ಹುಸೇನ್ ಪಾಷಾ ಶೆಕ್ಕೇರ, ಬುಡ್ನೇಸಾಬ ಮುಲ್ಲಾರ, ರಾಮಣ್ಣ ತಳಗಡೆ, ಮಾಹಲಿಂಗಪ್ಪ ಮಲ್ಲನಗೌಡ್ರ, ಶರಣಪ್ಪ ಭಜಂತ್ರಿ, ಶಂಕ್ರಪ್ಪ ವಣಗೇರಿ, ಕಾಶಿಮ್ ಸಾಬ ಮೇಲಗಡೆ, ಬಸವರಾಜ ಈಳಿಗೇರ, ಮಹಿಳೆಯರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X