ಚಿಕ್ಕಮಗಳೂರು l ಅಕ್ರಮ ಅರಣ್ಯ ಭೂ ಮಂಜೂರು ಆರೋಪ; ತಹಶೀಲ್ದಾರ್ ಪೂರ್ಣಿಮ ಅಮಾನತು

Date:

Advertisements

ಅರಣ್ಯ ಜಮೀನನ್ನು ಸರ್ಕಾರದ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಭೂ ಮಂಜೂರಾತಿ ಮಾಡಿರುವ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಸಿ.ಎಸ್ ಪೂರ್ಣಿಮ ಅವರನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ವಲಯದಲ್ಲಿ ಅಧಿಸೂಚಿತ ಅರಣ್ಯ ಪ್ರದೇಶವಾದ ರಂಗೇನಹಳ್ಳಿ ಗ್ರಾಮದ ಸರ್ವೆ ನಂ.4ರಲ್ಲಿ ಒಟ್ಟು 12.33 ಎಕರೆ ಅರಣ್ಯ ಜಮೀನನ್ನು ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ಪೂರ್ಣಿಮ ಅವರು ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರನ್ನು ಅಮಾನತು ಮಾಡಲಾಗಿದೆ.

“ಅರಣ್ಯ ಜಮೀನನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿ ದುರ್ನಡತೆ/ಕರ್ತವ್ಯ ಲೋಪವೆಸಗಿರುವ ಆಪಾದಿತ ಅಧಿಕಾರಿ ವಿರುದ್ಧ ‘Van (Sanrakshan Evam Samvardhan) Adhiniyam-1980’ರ ಸೆಕ್ಷನ್ 8(3B) ಮತ್ತು ‘Van (Sanrakshan Evam Samvardhan) Rules-2023’ರನಿಯಮ 15 ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕಾಯ್ದೆ-1963 ಅಡಿಯಲ್ಲಿ ದೂರು ದಾಖಲಿಸಲಾಗಿದೆ” ಎಂದು ವಲಯ ಅರಣ್ಯಾಧಿಕಾರಿ ಈದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

Advertisements
Screenshot 2025 01 03 17 43 27 72 439a3fec0400f8974d35eed09a31f914

“ಪ್ರಕರಣದಲ್ಲಿ ತರೀಕೆರೆಯ ಹಿಂದಿನ ತಹಶೀಲ್ದಾರ್ (ಈಗ ನಿವೃತ್ತರಾಗಿದ್ದಾರೆ) ಎನ್.ಟಿ ಧರ್ಮೋಜಿರಾವ್ ಮತ್ತು ಪೂರ್ಣಿಮ ಅವರು ಭಾಗಿಯಾಗಿದ್ದಾರೆ. ಸರ್ಕಾರದ ಅರಣ್ಯ ಭೂಮಿಯನ್ನು ಪರಭಾರೆ ಮಾಡಲು ನಿರ್ಬಂಧವಿದ್ದರೂ, ಅವರು ಅನಧಿಕೃತವಾಗಿ ಭೂ ಮಂಜೂರಾತಿ ಮಾಡಿರುವುದು ದೃಢಪಟ್ಟಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

“ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಸರ್ಕಾರದ ಭೂಮಿಯನ್ನು ಸಂರಕ್ಷಿಸುವುದರ ಬದಲು ಫಲಾನುಭವಿಗಳಿಂದ ಬಾಹ್ಯ ಪ್ರತಿಫಲಾಪೇಕ್ಷೆ ಪಡೆಯುವ ಉದ್ದೇಶದಿಂದ, ಸರ್ಕಾರದ ಭೂಮಿಯನ್ನು ಅನಧಿಕೃತವಾಗಿ ಮಂಜೂರು ಮಾಡಿ ಕರ್ನಾಟಕ ನಾಗರೀಕ ಸೇವಾ (ನಡತೆ)ನಿಯಮಗಳು-2021ರ ನಿಯಮ (3)ರ ಉಪ ನಿಯಮ-(1)(2)(3)(5)(6) & (7)ನ್ನು ಉಲ್ಲಂಘಿಸಿದ್ದಾರೆ. ಕರ್ತವ್ಯ ಲೋಪವೆಸಗಿ ಸರ್ಕಾರಿ ನೌಕರನಿಗೆ ತಕ್ಕದಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ, ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ ಹೆಚ್.ಜಿ ಅವರು ಆದೇಶ ಹೊರಡಿಸಿದ್ದಾರೆ” ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X