ವಿಜಯಪುರ | ತೊಗರಿ ಬೆಲೆಗೆ ಹೆಚ್ಚಿನ ಬೆಲೆ ನೀಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

Date:

Advertisements

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ನಾಡಕಚೇರಿಯ ಆವರಣದಲ್ಲಿ ರೈತ ಬಾಂಧವರು ತೊಗರಿ ಬೆಲೆ ದಿಢೀರನೆ ಕಡಿಮೆಯಾಗಿರುವದನ್ನು ಖಂಡಿಸಿ ತೊಗರಿಯನ್ನು ನೆಲಕ್ಕೆ ಚೆಲ್ಲಿ ಕೇಂದ್ರ ಸರ್ಕಾರ ತೊಗರಿ ಬೆಲೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಪ್ರಧಾನಮಂತ್ರಿ ಅವರಿಗೆ ಬರೆದ ಮನವಿಯನ್ನು ಉಪತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, “ಕಳೆದ ಐದಾರು ತಿಂಗಳ ಹಿಂದೆ ಪ್ರತಿ ಕ್ವಿಂಟಾಲ್‌ಗೆ ರೂ. 12 ಸಾವಿರ ಇದ್ದ ದರವನ್ನು ಕೇಂದ್ರ ಸರ್ಕಾರ ದಿಢೀರನೆ ದರ ಕಡಿಮೆ ಮಾಡಿ ಪ್ರತಿ ಕ್ವಿಂಟಾಲ್‌ಗೆ ರೂ. 7,550 ನಿಗದಿ ಮಾಡುವ ಮೂಲಕ ರೈತರನ್ನು ಬೀದಿಗೆ ತಳ್ಳುವ ಕೆಲಸ ಕೇಂದ್ರ ಸರ್ಕಾರ ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರೈತರು ಬೆಳೆದ ಯಾವುದೇ ಬೆಳೆಯ ಫಸಲನ್ನು ಕೇಂದ್ರ ಸರ್ಕಾರ ಖರೀದಿಸಲು ಮುಂದಾದ ಸಂದರ್ಭದಲ್ಲಿ ಬೆಲೆ ನಿಗದಿಪಡಿಸುವಾಗ ರೈತರೊಂದಿಗೆ ಚರ್ಚಿಸಿ ರೈತರ ಸಲಹೆ ಮೇರೆಗೆ ದರ ನಿಗದಿಪಡಿಸಬೇಕು. ರೈತರು ಬೆಳೆ ಬೆಳೆಯಲು ಸಾಕಷ್ಟು ಶ್ರಮಿಸುವ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ಖರ್ಚು ಮಾಡುತ್ತಾರೆ. ಇದನ್ನು ಪರಿಗಣಿಸಿ ಬೆಳೆಗಳಿಗೆ ಯೋಗ್ಯ ಮಾರುಕಟ್ಟೆ ದರ ನಿಗದಿಪಡಿಸುವಂತಾಗಬೇಕು. ಇದೀಗ ವಿದೇಶದಿಂದ ತೊಗರಿಯನ್ನು ಉದ್ದೇಶಪೂರ್ವಕವಾಗಿ ಆಮದು ಮಾಡಿಕೊಂಡು ತೊಗರಿ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಇದರಿಂದಾಗಿ ರೈತರಿಗೆ ಅನ್ಯಾಯವಾಗಿದೆ” ಎಂದರು.

Advertisements

ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಬದಲಾಗಿ ಉದ್ದಿಮೆದಾರರಿಗೆ ಅನುಕೂಲ ಮಾಡಿಕೊಡುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರ ಬೆಳೆಗಳಿಗೆ ಯೋಗ್ಯ ಬೆಲೆ ಸಿಗುವಂತಾಗಬೇಕು. ಕೂಡಲೇ ಕೇಂದ್ರ ಸರ್ಕಾರ ತೊಗರಿಗೆ ಪ್ರತಿ ಕ್ವಿಂಟಾಲ್‌ಗೆ ಮೊದಲಿದ್ದ ರೂ. 12 ಸಾವಿರ ದರಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಬೆಳ್ತಂಗಡಿ | ಅವ್ಯವಸ್ಥೆಯ ಆಗರವಾಗಿರುವ ‘ವೇಣೂರು ಸಂತೆ ಮಾರ್ಕೆಟ್’: ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯತ್!

ಪ್ರತಿಭಟನೆಯಲ್ಲಿ ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಚನ್ನಬಸಪ್ಪ ಸಿಂಧೂರ, ಹಣಮಂತರಾಯ ಗುಣಕಿ, ಮಲ್ಲನಗೌಡ ನಾಡಗೌಡ, ಗುರುಸಂಗಪ್ಪ ಶಿವಯೋಗಿ, ಮಹೇಶ ಯಡಳ್ಳಿ, ಭಾಗಪ್ಪ ನಾಟೀಕಾರ, ದಾವುಲಸಾಬ ನದಾಫ್, ಹಣಮಂತ ಮುರಾಳ, ಗಿರಿಮಲ್ಲಪ್ಪ ದೊಡಮನಿ, ಬಸವರಾಜ ಚೌಧರಿ, ಭೀಮನಗೌಡ ಪಾಟೀಲ, ಲಂಕೇಶ ತಳವಾರ, ಬಂಗೆಪ್ಪ ಸಾಸನೂರ, ನಿಂಗಣ್ಣ ನಾಡಗೌಡ, ಸಿದ್ದು ಮೇಟಿ, ರ್‍ಯಾಬಪ್ಪಗೌಡ ಪುಲೇಶಿ, ರಾಜೇಸಾಬ ವಾಲೀಕಾರ, ಬಂದಗೀಸಾ ಹಳ್ಳೂರ, ಲಕ್ಷ್ಮಣ ಚೌಧರಿ, ಶ್ರೀಶೈಲ ಮಾಳೂರ, ಈರಯ್ಯ ಹಿರೇಮಠ, ಶರಣಬಸಪ್ಪ ಹಾದಿಮನಿ, ಗುರುಲಿಂಗಪ್ಪ ಪಡಸಲಗಿ, ಈರಣ್ಣ ಬ್ಯಾಕೋಡ, ಪ್ರಕಾಶ ಶಂಕ್ರೆಪ್ಪಗೋಳ, ವೀರಭದ್ರಯ್ಯ ಜಂಗಿನಗಡ್ಡಿ, ಎಸ್.ಎಸ್.ಬೂದಿಹಾಳ, ಅರವಿಂದ ಬ್ಯಾಕೋಡ, ಮಹಾಂತೇಶ ಕೋರಿ, ಮಲ್ಲಪ್ಪ ಮಾದರ ಸೇರಿದಂತೆ ಇತರರು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X