ಗ್ರಾಮೀಣದ ಪುನರುಜ್ಜೀವನ ಪರಿಕಲ್ಪನೆಯಲ್ಲಿ ವಿವಿ ಪಾತ್ರ ಪ್ರಮುಖ: ಸಚಿವ ಎಚ್ ಕೆ ಪಾಟೀಲ್

Date:

Advertisements

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ಹಾಗೂ ಉದ್ಯೋಗ ಒದಗಿಸುವುದು ಮಾತ್ರವಲ್ಲದೆ, ‘ಗ್ರಾಮೀಣ ಬೇರು ಜಾಗತಿಕ ಮೇರು’ ಎಂಬ ಸಂದೇಶದೊಂದಿಗೆ ಗ್ರಾಮಗಳನ್ನು ಅಭಿವೃದ್ಧಿಪಡಿಸುವುದು, ನಶಿಸಿ ಹೋಗುತ್ತಿರುವ ಗ್ರಾಮಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕು ಎಂದು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್ ತಿಳಿಸಿದರು.

ಗದಗ ತಾಲೂಕಿನ ನಾಗಾವಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. “ವಿಶ್ವವಿದ್ಯಾಲಯಕ್ಕೆ ಮತ್ತು ಅದರ ಕಾರ್ಯ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ ಹಾಗೂ ಮಾನವ ಸಂಪನ್ಮೂಲ ಒದಗಿಸುವಲ್ಲಿ ಸರ್ಕಾರ ಬದ್ಧವಾಗಿದೆ. ವಿಶ್ವ ವಿದ್ಯಾಲಯವು ಹೆಚ್ಚು ಹೆಚ್ಚು ಕ್ರಿಯಾತ್ಮಕವಾಗಿ ಕಾರ್ಯ ನಿರ್ವಹಿಸುವ ಮೂಲಕ ʼಗ್ರಾಮೀಣ ಬೇರು ಜಾಗತಿಕ ಮೇರುʼ ಎಂಬ ವಿಶ್ವವಿದ್ಯಾಲಯದ ಆಶಯವನ್ನು ಸಾಕಾರಗೊಳಿಸಲು ನಿರಂತರ ಶ್ರಮಿಸಬೇಕು” ಎಂದು ಹೇಳಿದರು.

ವಿಶ್ವವಿದ್ಯಾಲಯದ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿರುವುದಾಗಿ ತಿಳಿಸಿದ ಸಚಿವರು, “ರೈತರ, ಬಡಜನರ ಅಭಿವೃದ್ಧಿಗೆ ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಗಳು ಪೂರಕವಾಗಿರಬೇಕು. ಗ್ರಾಮೀಣ ಭಾಗದ ಜನರ ಬದುಕು ಸುಧಾರಣೆಯ ಸಲುವಾಗಿ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯುವ ಯುವಜನರು ಶ್ರಮಿಸಬೇಕು. ಜಿಲ್ಲೆಯಲ್ಲಿನ ಗ್ರಾಮಗಳನ್ನು ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿ ಮಾಡಬೇಕು. ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ಬಳಕೆ, ನಿರ್ವಹಣೆ ಹಾಗೂ ಗ್ರಾಮೀಣ ಭಾಗದ ಜನರ ಸಮಸ್ಯೆಗೆ ಸ್ಪಂದಿಸಿ ಅವರಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಶ್ರಮಿಸುವ ಯುವ ಪಡೆಗಳ ನಿಮಾರ್ಣದ ಅವಶ್ಯಕತೆಯಿದೆ. ಈ ಅವಶ್ಯಕತೆಯ ಸಾಕಾರಕ್ಕಾಗಿ ವಿಶ್ವವಿದ್ಯಾಲಯದ ಬೋಧಕ ಬೋಧಕೇತರ ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಅತ್ಯಗತ್ಯವಾಗಿದೆ” ಎಂದರು.

Advertisements

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ್ ಚಟಪಲ್ಲಿ ಮಾತನಾಡಿ, “ಈ ವಿಶ್ವವಿದ್ಯಾಲಯವು ಕಡಿಮೆ ಅವಧಿಯಲ್ಲಿ ಎತ್ತರಕ್ಕೆ ಬೆಳದಿದ್ದು, ವಿಶ್ವವಿದ್ಯಾಲಯದಲ್ಲಿ ಸುಮಾರು 1,000 ಮಂದಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ವಿಶ್ವವಿದ್ಯಾಲಯದ ಆವರಣದಲ್ಲಿ ಸುಮಾರು 20,000 ಗಿಡಗಳನ್ನು ನೆಡಲಾಗಿದೆ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಭಾಗಗಳ ಅಭಿವೃಧಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹಲವು ತರಬೇತಿಗಳನ್ನು ಆಯೋಜಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರ ಜೀವನ ಸುಧಾರಿಸುವಲ್ಲಿ ಸರ್ಕಾರವು ಶ್ರಮಿಸುತ್ತಿದ್ದು, ಗ್ರಾಮೀಣ ಭಾಗದ ಜೀವನಕ್ರಮದ ಬಗ್ಗೆ ಅಧ್ಯಯನ ಮಾಡಿ, ಅದನ್ನು ಸುಧಾರಿಸುವತ್ತ ಸೇವಾ ಸಮರ್ಪಣಾ ಮನೋಭಾವ ಹೊಂದಿರುವ ಪ್ರತಿಭಾವಂತರನ್ನು ವಿಶ್ವವಿದ್ಯಾಲಯ ನಿರ್ಮಾಣ ಮಾಡುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಯಾರಿದು ಕನುಗೋಳು?

ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಶ್ವವಿದ್ಯಾಲಯಕ್ಕೆ ಸಂಬಂಧಿತ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು. ಇನ್ನೂ ಆಗಬೇಕಿರುವ ಕಾಮಗಾರಿಗಳ ಅನುಷ್ಠಾನದಲ್ಲಿ ಇರುವ ಸಮಸ್ಯೆಗಳ ಪರಿಹಾರ ಸರ್ಕಾರದ ಹಂತದಲ್ಲಿನ ಅನುಮೋದನೆ ಕುರಿತಂತೆ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ, ಉಪ ವಿಭಾಗಾಧಿಕಾರಿ ಅನ್ನಪೂರ್ಣ ಎಂ, ವಿಶ್ವವಿದ್ಯಾಲಯದ ರೆಜಿಸ್ಟ್ರಾರ್ ಬಸವರಾಜ ಲಕ್ಕಣ್ಣವರ, ವಿತ್ತಾಧಿಕಾರಿ ಜೆ.ಸಿ.ಪ್ರಶಾಂತ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿಶ್ವವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X