ಅಂಗನವಾಡಿ ಮೇಲ್ಚಾವಣಿ ಕುಸಿದು 4 ಮಕ್ಕಳಿಗೆ ಗಾಯವಾಗಿದ್ದು, ಓರ್ವ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಇದ್ದಕ್ಕಿಂದ್ದಂತೆ ಮೇಲ್ಚಾವಣಿ ಕುಸಿದಬಿದ್ದ ಹಿನ್ನೆಲೆ ಮಕ್ಕಳಿಗೆ ಗಾಯಗಳಾಗಿವೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ | 1190 ರೈತರಿಗೆ ತಲುಪದ ಫಸಲ್ ಭಿಮಾ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಸದ ಸುಧಾಕರ್ ಸೂಚನೆ
ಗಾಯಗೊಂಡ ಮಕ್ಕಳನ್ನು ಬಂಗಾರಪೇಟೆ ಸರಕಾರಿ ಆಸ್ಪತ್ರೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.