ಚಕ್ಕಡಿಗಾಡಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಭೀಮಾಪುರವಾಡಿ ವ್ಯಾಪ್ತಿಯ ಗಳತಗಾ-ಭೀಮಾಪುರವಾಡಿ ಮಾರ್ಗಮಧ್ಯದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕಾಗಲ್ ತಾಲೂಕಿನ ಹಮ್ಮಿದವಾಡಾ ಗ್ರಾಮದ ನಿವಾಸಿ ಪ್ರಿಯಾಂಕಾ ಕುಮಾರ ಜಾಧವ(34) ಎಂದು ಗುರುತಿಸಲಾಗಿದೆ.
ಈ ಕುರಿತು ಚಿಕ್ಕೋಡಿ ತಾಲೂಕಿನ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.