ಎಲ್ಲ ಸಿರಿಧಾನ್ಯಗಳನ್ನು ಎಂಎಸ್‌ಪಿ ವ್ಯಾಪ್ತಿಗೆ ತನ್ನಿ: ಕೇಂದ್ರಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ

Date:

Advertisements

ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌ರವರು ದೇಶದ ಎಲ್ಲ ರಾಜ್ಯಗಳ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕದ ಪರವಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಬೀಜೋತ್ಪಾದನಾ ಕೇಂದ್ರಗಳು ಮತ್ತು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಗಳನ್ನು ಬಲಪಡಿಸಲು ಹೊಸ ಯೋಜನೆಗಳನ್ನು ರೂಪಿಸಿ ನೆರವು ನೀಡುವಂತೆ ಚಲುವರಾಯಸ್ವಾಮಿರವರು ಮನವಿ ಮಾಡಿದರು.

Advertisements

ಜೋಳ(ಮಾಲ್ದಂಡಿ)ಕ್ಕೆ ಹಿಂಗಾರು ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆಯೂ ಸಹ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

minister 1

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಾಜ್ಯದ ಕೃಷಿ ಹಾಗೂ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿರವರು ಕೋರಿದರು. 

ಇದೇ ವೇಳೆ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18 ರಿಂದ 5ಕ್ಕೆ ಇಳಿಸುವಂತೆ ಕೋರಿದ ಬಳಿಕ, ಬೆಂಗಳೂರು ಜಿಲ್ಲೆಯ ಆನೇಕಲ್‌ನಲ್ಲಿರುವ ಸರ್ಕಾರಿ ಭೂಮಿಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಪೆಸ್ಟಿಸೈಡ್ ಫಾರ್ಮುಲೇಶನ್ ಟೆಕ್ನಾಲಜಿಯ ಸ್ಥಾಪನೆಗೂ ಧನಸಹಾಯ ಒದಗಿಸುವಂತೆ ರಾಜ್ಯ ಕೃಷಿ ಸಚಿವರು ಮನವಿ ಮಾಡಿದರು.

ಕೃಷಿ ವಿಶ್ವವಿದ್ಯಾಲಯಗಳ ಕ್ಷೇತ್ರ ಬೆಳೆಗಳ ವಿಶೇಷವಾಗಿ ಎಣ್ಣೆಕಾಳು ಬೆಳೆಗಳ ತಳಿವರ್ಧೆನೆಗೆ ಕೇಂದ್ರೀಯ ಕೃಷಿ ಸಂಶೋಧನೆ ಹಾಗೂ ವಿಸ್ತರಣೆ ಇಲಾಖೆ ಮೂಲಕ ಹೆಚ್ಚಿನ ಹಣವನ್ನು ಮಂಜೂರು ಮಾಡಲು ಕೇಂದ್ರ ಸಚಿವರಿಗೆ ವಿನಂತಿಸಿದರು.

ರಾಜ್ಯದಲ್ಲಿ ಸವಳು ಮತ್ತು ಜವಳು ಮಣ್ಣು ಸುಧಾರಣೆಗೆ ಹೊಸ ಯೋಜನೆಯನ್ನು ಪ್ರಾರಂಭಿಸಬಹುದಾಗಿದೆ ಎಂದು ಕೇಂದ್ರ ಸಚಿವರ ಗಮನ ಸೆಳೆದ ಎನ್‌.ಚಲುವರಾಯಸ್ವಾಮಿ ರೈತರ ಹೊಲಗಳಲ್ಲಿ ಕೃಷಿ ಅರಣ್ಯೀಕರಣ ಪ್ರದೇಶ ವಿಸ್ತರಣೆಗೆ ಧನಸಹಾಯ ಹೆಚ್ಚಿಸಲು ಕೋರಿದರು.

ಕರ್ನಾಟಕದಲ್ಲಿ ಕ್ಲಸ್ಟರ್ ಆಧಾರದ ಮೇಲೆ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಅಗ್ರಿ-ಟೆಕ್ ಸ್ಟಾರ್ಟ್ಅಪ್‌ಗಳ ಮೂಲಕ ಕೋಲ್ಡ್ ಚೈನ್ ಅಭಿವೃದ್ಧಿ ಮಾಡಿ ಸಂಸ್ಕರಣೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಮಾರ್ಕೆಟಿಂಗ್, ರಫ್ತು ಮುಂತಾದ ತಂತ್ರಜ್ಞಾನಗಳನ್ನು ಉತ್ತೇಜಿಸಲು ಯೋಜನೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌, ಕೃಷಿ ರಾಜ್ಯ ಸಚಿವರು ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ-2025ಕ್ಕೆ ಆಗಮಿಸುವಂತೆ ಎನ್.ಚಲುವರಾಯಸ್ವಾಮಿರವರು ಅಹ್ವಾನಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X