ದಟ್ಟವಾಗಿ ಆವರಿಸಿದ್ದ ಮಂಜಿನ ಕಾರಣದಿಂದಾಗಿ ಹಲವು ವಾಹನಗಳು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹರಿಯಾಣದ ಹಿಸಾರ್-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಂಜು ಮುಸುಕಿದ ಕಾರಣ ದಾರಿ ಕಾಣದೆ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಉಕ್ಲಾನಾದ ಸುರೇವಾಲಾ ಚೌಕ್‌ನಲ್ಲಿ ಹಿಂದಿನಿಂದ ಬಂದ ಕಾರೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನು ಓದಿದ್ದೀರಾ? ಹರಿಯಾಣ | ಗುಂಡಿನ ದಾಳಿ; ಇಬ್ಬರು ಸಾವು
ಈ ಅಪಘಾತದಲ್ಲಿ ಗಾಯಾಳುಗಳನ್ನು ರಕ್ಷಿಸಲು ಜನರು ಧಾವಿಸಿ ರಸ್ತೆಯ ಮಧ್ಯದಲ್ಲಿ ನಿಂತಿದ್ದಾಗ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ದಟ್ಟವಾದ ಮಂಜು ಆವರಿಸಿದ ಕಾರಣ ದಾರಿ ಕಾಣುತ್ತಿರಲಿಲ್ಲ ಎಂದು ಹೇಳಲಾಗಿದೆ.
ಟ್ರಕ್ ಹ್ಯುಂಡೈ ಕಾರಿನ ಮೇಲೆ ಬಿದ್ದಿದ್ದು, ಕನಿಷ್ಠ ಮೂರು ವಾಹನಗಳು ಅಪಘಾತಕ್ಕೀಡಾಗಿದೆ. ಇನ್ನು ಜನರು ಕಾರಿನ ಗಾಜನ್ನು ಹೊಡೆದು ಲಾರಿ ಚಾಲಕನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಹೆದ್ದಾರಿಯನ್ನು ತೆರವುಗೊಳಿಸಿದರು. ಸಂತ್ರಸ್ತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಇನ್ನು ಈಗಾಗಲೇ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜು ಆವರಿಸಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಉತ್ತರ ಭಾರತದ ಹಲವು ನಗರಗಳಲ್ಲಿ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿದೆ ಎಂದು ವರದಿಯಾಗಿದೆ.
