ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್: ಕಕ್ಕಾಬಿಕ್ಕಿಯಾದ ಮೋದಿ; ವಿಡಿಯೋ ವೈರಲ್

Date:

Advertisements

ದೆಹಲಿ ವಿಧಾನಸಭಾ ಚುನಾವಣಾ ಅಬ್ಬರ ಹೆಚ್ಚಾಗಿದೆ. ಬಿಜೆಪಿ ಪರವಾಗಿ ಪ್ರಧಾನಿ ಮೋದಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಭಾನುವಾರ, ನಡೆದ ಚುನಾವಣಾ ಪ್ರಚಾರದಲ್ಲಿ ಮೋದಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮಾತನಾಡಲಾಗದೆ ಮೋದಿ ಕಕ್ಕಾಬಿಕ್ಕಿಯಾಗಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೋದಿ ಅವರ ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಟೆಲಿಪ್ರಾಂಪ್ಟರ್ ಹಾಕಿಕೊಂಡು, ಭಾಷಣ ಮಾಡುತ್ತಾರೆ ಎಂಬ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಈ ಹಿಂದೆಯೂ ಒಮ್ಮೆ ಭಾಷಣದ ವೇಳೆ ಟೆಲಿಪ್ರಾಮ್ಟರ್‌ ಕೈಕೊಟ್ಟಿದ್ದರಿಂದ ಮೋದಿ ಅವರು ಮಾತನಾಡುವಾಗ ತಡಬಡಾಯಿಸಿದ್ದರು.

ಇದೀಗ, ಮತ್ತೆ ಅಂತದ್ಧೇ ಘಟನೆ ನಡೆದಿದೆ. ಭಾನುವಾರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶ ಆಯೋಜಿಸಿತ್ತು. ಪ್ರಚಾರದಲ್ಲಿ ಭಾಗಿಯಾಗಿದ್ದ ಮೋದಿ ಅವರು ಅಬ್ಬರದ ಭಾಷಣ ಮಾಡಲು ಮುಂದಾಗಿದ್ದರು. ಈ ವೇಳೆ, ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮೋದಿ ಅವರು ಭಾಷಣದ ಮಧ್ಯೆ ತಡವರಿಸಿದ್ದಾರೆ. ಭಾಷಣವನ್ನು ಸುಮಾರು 30 ಸೆಕೆಂಡ್‌ಗಳ ಕಾಲ ನಿಲ್ಲಿಸಿದ್ದು, ಟೆಲಿಪ್ರಾಂಪ್ಟರ್ ಪುನರಾರಂಭವಾದ ಬಳಿಕ ಮತ್ತೆ ಭಾಷಣ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

Advertisements

ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ಮೋದಿ ಅವರು ತಮ್ಮ ಭಾಷಣಗಳ ಸಮಯದಲ್ಲಿ ಟೆಲಿಪ್ರಾಂಪ್ಟರ್ಅನ್ನು ಬಳಸುತ್ತಾರೆ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ದೆಹಲಿಯಲ್ಲಿ ಬಿಜೆಪಿಯಂತೆ ಮೋದಿಜಿ ಅವರ ಟೆಲಿಪ್ರಾಂಪ್ಟರ್ ಕೂಡ ವಿಫಲವಾಗಿದೆ…” ಎಎಪಿ ಲೇವಡಿ ಮಾಡಿದೆ.

ಈ ಹಿಂದೆ, 2022ರ ಜನವರಿ 18ರಂದು world economy forum ಆಯೋಜಿಸಿದ್ದ ದಾವೂಸ್ ಅಜೆಂಡಾ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದರು. ಆ ವೇಳೆಯೂ ಶೃಂಗಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತ್ತು. ಆಗಲೂ ಭಾಷಣ ಮಾಡುವಾಗ ಮೋದಿ ತಬ್ಬಿಬ್ಬಾಗಿದ್ದರು.

ಆ ವೇಳೆ, ಮೋದಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದ ನೆಟ್ಟಿಗರು, ಪ್ರಧಾನ ಮಂತ್ರಿ ಮೋದಿಯವರು ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗ ಅವರ ಸುತ್ತಲೂ ಕಾಣುವ ಗಾಜಿನ ಫಲಕವು ಬುಲೆಟ್ ಪ್ರೂಫ್ ಗ್ಲಾಸ್ ಎಂದು ಹಲವರು ಭಾವಿಸುತ್ತಾರೆ. ಆದರೆ, ಅದು ವಾಸ್ತವವಾಗಿ ಟೆಲಿಪ್ರಾಂಪ್ಟರ್ ಆಗಿದೆ. ಆ ಟೆಲಿಪ್ರಾಂಪ್ಟರ್ ಸಹಾಯದಿಂದ ಯಾವುದೇ ಸಮಸ್ಯೆಯಿಲ್ಲದೆ ಪ್ರಧಾನಿ ಭಾಷಣ ಮಾಡುತ್ತಾರೆ. ಅವರ ಭಾಷಣದ ವೇಗವನ್ನು ನಿರ್ವಾಹಕರು ನಿಯಂತ್ರಿಸುತ್ತಾರೆ. ಆದರೆ, ಆ ಟೆಲಿಪ್ರಾಂಪ್ಟರ್ ಕಾಣದಂತೆ ವಿಡಿಯೋಗ್ರಫರ್‌ಗಳು ಚಿತ್ರೀಕರಿಸುತ್ತಾರೆ” ಎಂದು ಆರೋಪಿಸಿದ್ದರು.

ಅದಾದ ಬಳಿಕ, 2022ರ ಆಗಸ್ಟ್‌ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಮೋದಿ ಅವರು ಟೆಲಿಪ್ರಾಂಪ್ಟರ್‌ಅನ್ನು ಬಳಸದೆ, ಭಾಷಣದ ಪ್ರಿಟ್‌ಔಟ್‌ ತೆಗೆದ ಪೇಪರ್‌ ಬಳಸಿಕೊಂಡು ಭಾಷಣ ಮಾಡಿದ್ದರು. ಇದೀಗ, ಮತ್ತೆ ಟೆಲಿಪ್ರಾಂಪ್ಟರ್ ಬಳಸಿದ್ದು, ಯಡವಟ್ಟು ಮಾಡಿಕೊಂಡಿದ್ದಾರೆ. ಮತ್ತೆ ನೆಟ್ಟಿಗರ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X