ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅನಾರೋಗ್ಯ ಕಾರಣದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರು ಶಿವಮೊಗ್ಗದ ಸಾಗರಕ್ಕೆ ಕೊಂಡೊಯ್ಯಲಾಗುತ್ತಿದ್ದು, ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಪುತ್ರ ನವೀನ್ ಡಿಸೋಜಾ ತಿಳಿಸಿದ್ದಾರೆ.
ನಾ ಡಿಸೋಜ ಅವರು ಬಂಜೆ ಬೆಂಕಿ, ಮುಳುಗಡೆ, ಕಾಡಿನ ಬೆಂಕಿ, ದ್ವೀಪ, ಬಳುವಳಿ ಕಾದಂಬರಿಗಳನ್ನು ಬರೆದಿದ್ದಾರೆ.