ರಾಯಚೂರು | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಹೇಳಿಕೆ ಖಂಡಿಸಿ ಜ.7ರಂದು ‘ದೇವದುರ್ಗ ಬಂದ್‌’

Date:

Advertisements

ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ಜನವರಿ 7ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಕರೆ ನೀಡಿದರು.

ನಗರದ ಜಹೀರುದ್ದೀನ್ ಪಾಶಾ ಸರ್ಕಲ್‌ನಿಂದ ಮೆರವಣಿಗೆ ಪ್ರಾರಂಭಗೊಂಡು ಅಂಬೇಡ್ಕರ್ ವೃತ್ತದವರೆಗೆ ಅಮಿತ್ ಷಾ ಅಣಕು ಶವಯಾತ್ರೆ ಮತ್ತು ಪ್ರತಿಕೃತಿ ದಹನ ಮಾಡುವ ಮೂಲಕ ಪ್ರತಿಭಟಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದೇವದುರ್ಗ ತಾಲೂಕಿನ ಆಸ್ಪತ್ರೆ ಮೆಡಿಕಲ್ ಹೊರತುಪಡಿಸಿ ನಗರದ ಅಂಗಡಿ ಮುಂಗ್ಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದರು.

Advertisements

ಇದನ್ನು ಓದಿದ್ದೀರಾ? ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ತಾಲೂಕಿನ ಪ್ರಮುಖ ಹೋಬಳಿಗಳು ಕೂಡ ಅರಕೇರ, ಗಬ್ಬೂರು, ಜಾಲಹಳ್ಳಿ ಮತ್ತು ಇತರೆ ಹಳ್ಳಿಗಳಿಂದ ಎಲ್ಲ ಆತ್ಮೀಯ ಸಂಘಟನಾಕಾರರು ಬೆಂಬಲ ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯವರು ಈ ಹೋರಾಟಕ್ಕೆ ತಮ್ಮ ಸೂಕ್ತ ಪೋಲಿಸ್ ಬಂದೋಬಸ್ತ್ ನೀಡಿ ಸಹಕರಿಸಬೇಕು ಹಾಗೂ ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಬೇಕು ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ಮನವಿ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X