ಆ್ಯಂಬುಲೆನ್ಸ್‌ ಅಪಘಾತ | ತಿರುಪತಿಯಲ್ಲಿ ಇಬ್ಬರು ಭಕ್ತರ ಸಾವು

Date:

Advertisements

ನಿಯಂತ್ರಣ ತಪ್ಪಿ 108 ಆ್ಯಂಬುಲೆನ್ಸ್‌ ಅಪಘಾತವಾಗಿ ಇಬ್ಬರು ಭಕ್ತರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ತಿರುಪತಿಯಲ್ಲಿ ಸೋಮವಾರ ನಡೆದಿದೆ.

ತಿರುಪತಿ ತಿರುಮಲ ದೇವಾಲಯಕ್ಕೆ ಸಾಗುತ್ತಿದ್ದ ಭಕ್ತರ ಗುಂಪಿನ ಮೇಲೆ ಆ್ಯಂಬುಲೆನ್ಸ್‌ ಹರಿದಿದೆ. ಚಂದ್ರಗಿರಿ ಮಂಡಲದ ನರಸಿಂಗಪುರದಲ್ಲಿ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಸಿ ಟಿ ರವಿಗೆ ಸ್ವಾಗತಿಸಿದ್ದ 7 ಆ್ಯಂಬುಲೆನ್ಸ್​ ವಿರುದ್ಧ ಎಫ್‌ಐಆರ್

Advertisements

ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ. ಮೃತರನ್ನು ಅನ್ನಮಯ್ಯ ಜಿಲ್ಲೆಯ ರಾಮಸಮುದ್ರ ಮಂಡಲದ ಪೆಡ್ಡ ರೆದ್ದಮ್ಮ (40) ಮತ್ತು ಲಕ್ಷ್ಮಮ್ಮ (45) ಎಂದು ಗುರುತಿಸಲಾಗಿದೆ.

ಆ್ಯಂಬುಲೆನ್ಸ್‌ನಲ್ಲಿ ರೋಗಿಯೊಬ್ಬರು ಇದ್ದರು ಎಂದು ಹೇಳಲಾಗಿದೆ. ಸದ್ಯ ಗಾಯಾಳುಗಳನ್ನು ತಿರುಪತಿಯ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ.

ಇನ್ನು ಈ ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿರಲಿಲ್ಲ. ಪೊಲೀಸರು ದಟ್ಟವಾಗಿ ಆವರಿಸಿದ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಚಂದ್ರಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

Download Eedina App Android / iOS

X