‘ಗೃಹಲಕ್ಷ್ಮಿ’ ಮಾದರಿಯಲ್ಲಿ ದೆಹಲಿಯಲ್ಲಿ ‘ಪ್ಯಾರಿ ದೀದಿ ಯೋಜನೆ’: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಕಟಿಸಿದರು.

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್ ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ “ಪ್ಯಾರಿ ದೀದಿ ಯೋಜನೆ” ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ” ಎಂದು ಹೇಳಿದರು.

Advertisements

“ಮೊದಲ ಮೂರು ತಿಂಗಳಲ್ಲಿ ಎಲ್ಲ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಟೆ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ” ಎಂದರು ಹೇಳಿದರು.

ಮಾಸಿಕ 4-5 ಸಾವಿರ ಉಳಿತಾಯ

“ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. 1.22 ಕೋಟಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ಹಣ ಪಡೆಯುತ್ತಿದ್ದಾರೆ. ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ಬದಲಾವಣೆ ತರಲಾಗಿದೆ. ಪ್ರತಿ ತಿಂಗಳು 4-5 ಸಾವಿರ ಉಳಿತಾಯವಾಗುತ್ತಿದೆ. ಇದರಿಂದ ರಾಜ್ಯದ ಆರ್ಥಇಕತೆ ಪ್ರಗತಿ ಸಾಧಿಸುತ್ತಿದೆ. ಸಮಾಜದ ಪ್ರತಿ ವರ್ಗದ ಹಿತವನ್ನು ಕಾಯಬೇಕು ಎಂಬುದು ಮಹಾತ್ಮಾ ಗಾಂಧಿ ಅವರ ಸಂದೇಶವಾಗಿತ್ತು. ಹೀಗಾಗಿ ನಮ್ಮ ಸರ್ಕಾರ ಈ ಯೋಜನೆ ಜಾರಿ ಮಾಡಿದೆ” ಎಂದು ತಿಳಿಸಿದರು.

ಟೀಕಿಸಿದವರಿಂದಲೇ ನಮ್ಮ ಯೋಜನೆ ನಕಲು

“ನಾವು ಈ ಯೋಜನೆ ಘೋಷಣೆ ಮಾಡಿದಾಗ, ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರ ದಿವಾಳಿಯಾಗಲಿದೆ ಎಂದು ಮಧ್ಯಪ್ರದೇಶದಲ್ಲಿ ಹೇಳಿದರು. ನಂತರ ಮಹಾರಾಷ್ಟ್ರದಲ್ಲೂ ನಮ್ಮ ಯೋಜನೆ ವಿರುದ್ಧ ಅಪಪ್ರಚಾರ ಮಾಡಿದರು. ಅಂತಿಮವಾಗಿ ಎಲ್ಲಾ ರಾಜ್ಯಗಳ ಚುನಾವಣೆಯಲ್ಲೂ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕಲ್ಯಾಣಕ್ಕಾಗಿ, ರಕ್ಷಣೆಗಾಗಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ” ಎಂದರು.

“ಮೋದಿ ಅವರ ಸರ್ಕಾರ ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿತ್ತು. ಆದರೆ ಬೆಲೆಗಳನ್ನು ಡಬಲ್ ಮಾಡಿತು. ಜನಧನ್ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದಂತೆ ಭರವಸೆ ಈಡೇರಿಸಲಿಲ್ಲ. ಬಿಜೆಪಿ ಸರ್ಕಾರಗಳು ಕೊಟ್ಟ ಮಾತನ್ನು ಎಂದಿಗೂ ಉಳಿಸಿಕೊಂಡಿಲ್ಲ. ಆದರೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿವೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು, ಗ್ರಾಮೀಣ ಉದ್ಯೋಗ ಖಾತರಿ, ಮಾಹಿತಿ ಹಕ್ಕು ಸೇರಿದಂತೆ ಸಂವಿಧಾನಿಕ ತಿದ್ದುಪಡಿ ಮೂಲಕ ಗ್ಯಾರಂಟಿ ಯೋಜನೆ ನೀಡಲಾಗಿತ್ತು. ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿಗಳ ಕಾಲ ದೇಶವನ್ನು ಆಳಿದೆ. ಮತ್ತೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಒಳ್ಳೆಯ ದಿನಗಳು ಮತ್ತೆ ಬರಲಿವೆ. ದೆಹಲಿ ಹಾಗೂ ಇಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ತರಲು ಜನರು ನಮಗೆ ಮತ್ತೊಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕತೆ ಹದಗೆಡುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಅಗತ್ಯವಾದ ಅನುದಾನ ಮೀಸಲಿಟ್ಟಿದ್ದೇವೆ. ನಮ್ಮ ರಾಜ್ಯದ ಬಜೆಟ್ ಗಾತ್ರ 3.70 ಲಕ್ಷ ಕೋಟಿಗೂ ಹೆಚ್ಚಿದೆ. ಅದರಲ್ಲಿ 56 ಸಾವಿರ ಕೋಟಿ ಈ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಫಲಾನುಭವಿಗಳ ಖಾತೆಗೆ ಹಣ ತಲುಪುವುದು 10-15 ದಿನಗಳು ವಿಳಂಬವಾಗಬಹುದು, ಆದರೆ ನಮ್ಮ ಯೋಜನೆ ನಿಲ್ಲುವುದಿಲ್ಲ. ದೇಶದಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಆರ್ಥಿಕತೆ ಹೊಂದಿರುವ ರಾಜ್ಯ. ನಾವು ದೇಶಕ್ಕೆ ಹೆಚ್ಚು ತೆರಿಗೆ ನೀಡುತ್ತಿದ್ದು, ನಮ್ಮ ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದೆ” ಎಂದರು.

ಬಸ್ ದರ ಏರಿಕೆ ಬಗ್ಗೆ ಕೇಳಿದಾಗ, “ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ಕೆಲವು ಮಾನದಂಡಗಳಿವೆ. ಇಂಧನ ಬೆಲೆ ಏರಿಕೆಯಾದಾಗ ಟಿಕೆಟ್ ದರ ಕೂಡ ಏರಿಕೆಯಾಗುತ್ತದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲೇ ನಾವು ಇಂಧನೆ ಬೆಲೆ ಏರಿಕೆಯಾದರೆ ಟಿಕೆಟ್ ದರ ಏರಿಸಲು ತೀರ್ಮಾನಿಸಲಾಗಿತ್ತು. ರಾಜ್ಯ ಸಾರಿಗೆ ಸಂಸ್ಥೆಗಳು ತಮ್ಮದೇ ಸಾಮರ್ಥ್ಯಗಳ ಮೇಲೆ ನಡೆಯುತ್ತಿವೆ” ಎಂದು ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X