ಮಾರ್ಚ್ 1-8ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

Date:

Advertisements

ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಜ.6) ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, “ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಸಾಮಾಜಿಕ ನ್ಯಾಯ ಎಂಬ ಥೀಮ್‌ ಆಧರಿಸಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು” ಎಂದರು.

“ಈ ಬಾರಿಯೂ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್ ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ: ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ” ಎಂದು ಹೇಳಿದರು.

Advertisements

9 ಕೋಟಿ ರೂ.ಗಳ ವೆಚ್ಚ

“2006 ರಿಂದ ಪ್ರಾರಂಭವಾದ ಚಲನಚಿತ್ರೋತ್ಸವ ಇದೀಗ 16 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ. ಕಳೆದ ವರ್ಷ 7 ಕೋಟಿ ರೂ. ವೆಚ್ಚವಾಗಿತ್ತು. ಈ ವರ್ಷ 9 ಕೋಟಿ ರೂ.ಗಳ ವೆಚ್ಚದಲ್ಲಿ ಚಲನಚಿತ್ರೋತ್ಸವ ನಡೆಸಲು ಸಮಿತಿ ತೀರ್ಮಾನಿಸಿದೆ. ಮಾ.1 ರಂದು ಉದ್ಘಾಟನೆ, 8 ರಂದು ಸಮಾರೋಪ ಸಮಾರಂಭ ಜರುಗಲಿದೆ. ಸಮಿತಿಯು ಸಿನಿಮೋತ್ಸವದ ರಾಯಭಾರಿಯನ್ನು ತೀರ್ಮಾನಿಸಲಿದೆ. ಸಮಾರಂಭವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪಾಲ್ಗೊಳ್ಳುವರು. ಬಜೆಟ್ ಪೂರ್ವಭಾವಿ ಚರ್ಚೆಗಳಿರುವುದರಿಂದ ಮಾರ್ಚ್ 1 ರಿಂದ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

“ಕನ್ನಡ ಚಲನಚಿತ್ರಗಳ ಉತ್ತೇಜನ ನೀಡುವಂತಹ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳ ಸಹಾಯಧನಕ್ಕಾಗಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ಚಿತ್ರಗಳನ್ನು ವೀಕ್ಷಿಸುತ್ತಿದೆ. ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಸರ್ಕಾರ ಈಗಾಗಲೇ 110 ಎಕರೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿದ್ದು, ಪಿಪಿಪಿ ಮಾದರಿಯಲ್ಲಿ ಚಿತ್ರನಗರಿಯನ್ನು ನಿರ್ಮಾಣದ ಯೋಜನೆ ಅನುಷ್ಠಾನಗೊಳಿಸಲಾಗುವುದು” ಎಂದರು.

ಎಂಎಲ್‌ಸಿ ನಾಮನಿರ್ದೇಶನ

ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, “ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರವನ್ನು ಕೈಗೊಳ್ಳಲಿದ್ದು, ಸಿನಿಮಾ , ಸಾಹಿತ್ಯ, ಸಾಮಾಜಿಕ ಕ್ಷೇತ್ರಗಳೂ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಅಭ್ಯರ್ಥಿಯನ್ನು ಪರಿಗಣಿಸಲಾಗುವುದು” ಎಂದರು.

ಭೋಜನಕೂಟದಲ್ಲಿ ರಾಜಕೀಯ ಚರ್ಚೆಯಾಗಲಿಲ್ಲ

“ಸಚಿವ ಸತೀಶ್ ಜಾರಕಿಹೊಳಿಯವರ ಆಹ್ವಾನದ ಮೇರೆಗೆ ಭೋಜನಕೂಟದಲ್ಲಿ ಭಾಗಹಿಸಲಾಗಿತ್ತು. ರಾಜಕೀಯ ವಿಚಾರಗಳು ಚರ್ಚಿಯಾಗಿಲ್ಲ. ಪಕ್ಷವನ್ನು ಗಟ್ಟಿಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಮಾಧ್ಯಮಗಳಲ್ಲಿ ಊಹಾಪೋಹದ ವರದಿಗಳು ಬಂದಿವೆ. ಹೊಸ ವರ್ಷದ ಪ್ರಯುಕ್ತ ಭೋಜನಕೂಟ ಏರ್ಪಡಿಸಲಾಗಿತ್ತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X