ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿ ನಡೆದಿದೆ.
ಸೋಮವಾರ ಮುಂಜಾನೆ ಈ ಘಟನೆ ನಡೆದಿದ್ದು. ಲಾರಿ ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಭಾಗದಿಂದ ಹೊನ್ನಾವರ ಕಡೆ ಬರುತಿತ್ತು ಎಂದು ತಿಳಿದು ಬಂದಿದೆ. ಅತಿ ವೇಗದ ಚಾಲನೆಯೇ ಲಾರಿ ಪಲ್ಟಿಯಾಗಲು ಕಾರಣ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.
ಮೃತರು ಮತ್ತು ಗಾಯಳುಗಳು ಮೂಲತಃ ಬಿಹಾರದವರು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
