ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಲಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಸಬೇಕಿದೆ.
ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗೆಯೇ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರವನ್ನು ಕಸಿದುಕೊಳ್ಳಲು ಕಣ್ಣಿಟ್ಟಿದೆ. ಅಚ್ಚರಿಯ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಕೂಡ ಪ್ರಬಲ ಹೋರಾಟಕ್ಕೆ ಸಿದ್ಧತೆ ನಡೆಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ
