ಸಾಲಬಾಧೆಯಿಂದ ಜಿಗುಪ್ಸೆಗೊಂಡು ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿದೆ.
ಭೀಮರಾವ್ ಪ್ರಭು ಸಲಗರ್ (29) ಮೃತ ರೈತ. ಮೃತರಿಗೆ 8 ಎಕರೆ ಜಮೀನು ಇದೆ. ತಂದೆ, ತಾಯಿ, ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಗ್ರಾಮದ ಕೆಜಿಬಿ ಬ್ಯಾಂಕಿನಲ್ಲಿ ₹3 ಲಕ್ಷ ಸಾಲ ಹಾಗೂ ಖಾಸಗಿ ಬಳಿ ಕೃಷಿ ಚಟುವಟಿಕೆ, ಕುಟುಂಬ ನಿರ್ವಹಣೆಗೆ ₹7 ಲಕ್ಷ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.
ಪ್ರಸಕ್ತ ವರ್ಷ ಹೊಲದಲ್ಲಿ ನಿರೀಕ್ಷೆಯಂತೆ ಆದಾಯ ಆಗದ ಕಾರಣದಿಂದ ಜಿಗುಪ್ಸೆ ಹೊಂದಿ ಮನೆಯಲ್ಲಿ ವಿಷ ಸೇವಿಸಿದ್ದರು, ಕೂಡಲೇ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ. ಈ ಕುರಿತು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಪಿಎಂಎವೈ-ಜಿ : ಜಿಲ್ಲೆಗೆ 15 ಸಾವಿರ ಮನೆ ಮಂಜೂರು : ಸಂಸದ ಸಾಗರ ಖಂಡ್ರೆ
ಪರಿಹಾರಕ್ಕೆ ಒತ್ತಾಯ : ಸಾಲಬಾಧೆಯಿಂದ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳವಳಕಾರಿಯಾಗಿದೆ. ಇದೀಗ ಕುಟುಂಬ ಸಂಕಷ್ಟದಲ್ಲಿದೆ. ಮೃತ ರೈತನ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಒತ್ತಾಯಿಸಿದ್ದಾರೆ.