ಲಕ್ನೋದಲ್ಲಿ ಕಾರ್ಪೋರೇಟರ್ ಸೇರಿದಂತೆ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ನಾಯಕ ರಮೇಶ್ ಬಿಧುರಿ ವಿರುದ್ಧ ದೂರು ದಾಖಲಿಸಿದ್ದಾರೆ.
“ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿ ನಿರ್ಮಿಸಲಾಗುವುದು” ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ರಮೇಶ್ ಬಿಧುರಿ ವಿವಾದದಲ್ಲಿ ಸಿಲುಕಿದ್ದಾರೆ. ಅದಾದ ಬಳಿಕ ಮಾಧ್ಯಮಗಳ ಮುಂದೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡು ಇನ್ನಷ್ಟು ಟೀಕೆಗೆ ಒಳಗಾಗಿದ್ದಾರೆ.
ಇದನ್ನು ಓದಿದ್ದೀರಾ? ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ನುಣುಪಾದ ರಸ್ತೆ ನಿರ್ಮಾಣ : ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಖಂಡನೆ
ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್‌ನ ಮಾಳವೀಯ ನಗರ ವಾರ್ಡ್ 21 ಅನ್ನು ಪ್ರತಿನಿಧಿಸುವ ಕಾಂಗ್ರೆಸ್ ನಾಯಕಿ ಮಮತಾ ಚೌಧರಿ ಅವರು ಲಿಖಿತ ದೂರು ಸಲ್ಲಿಸಿದ್ದು, ಬಿಧುರಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಬಜಾರ್ ಖಾಲಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ನೀಡಿದ ದೂರು ಪತ್ರದಲ್ಲಿ, “ಬಿಧುರಿ ಹೇಳಿಕೆಯು ಸಾರ್ವಜನಿಕ ವ್ಯಕ್ತಿಯಾಗಿರುವ ಪ್ರಿಯಾಂಕಾ ಗಾಂಧಿಗೆ ಅಗೌರವಿಸಿದಂತೆ ಮಮತ್ತು ಮಾನನಷ್ಟ ಮಾಡಿದಂತಿದೆ. ಮಹಿಳೆಯ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿರುವ ರಮೇಶ್ ಬಿಧುರಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಔಪಚಾರಿಕ ದೂರಿನಲ್ಲಿ ಬರೆದಿದ್ದಾರೆ.
ಇದನ್ನು ಓದಿದ್ದೀರಾ? ಬಿಧುರಿ ‘ಮಹಿಳಾ ವಿರೋಧಿ’ – ಬಿಜೆಪಿ ನಾಯಕನ ನಿವಾಸದ ಗೇಟ್ ಮೇಲೆ ಬರೆದ ಪ್ರತಿಭಟನಾಕಾರರು
ಇನ್ನು ದೆಹಲಿ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬಿಜೆಪಿ ನಾಯಕ ರಮೇಶ್ ಬಿಧುರಿ ನಿವಾಸದ ಹೊರಗಡೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಬಿಧುರಿ ನಿವಾಸದ ಗೇಟ್ ಮೇಲೆ ಕಪ್ಪು ಪೇಂಟ್ ಬಳಸಿ ‘ಮಹಿಳಾ ವಿರೋಧಿ’ ಎಂದು ಬರೆದಿದ್ದಾರೆ. ಒಂದು ಹೆಣ್ಣಿನ ದೇಹದ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ಖಂಡನಾರ್ಹ ಎಂದು ಯುವ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
