ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ ಉಂಟಾಗಿದ್ದು, ಒಟ್ಟು ಒಂಬತ್ತು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ರಕ್ಷಣಾ ತಂಡಗಳು ರಾತ್ರಿಯಿಡೀ ಕಾರ್ಮಿಕರ ರಕ್ಷಣೆ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಯಾಗಿದೆ. ಮೂರು ಮೃತದೇಹಗಳನ್ನು ರಕ್ಷಣಾ ತಂಡಗಳು ಗುರುತಿಸಿವೆ. ಆದರೆ ಇನ್ನೂ ಗಣಿಯಿಂದ ಹೊರತರಲು ಸಾಧ್ಯವಾಗಿಲ್ಲ ಎಂದು ಸ್ಥಳೀಯ ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಅಸ್ಸಾಂ ಕೂಲಿ ಕಾರ್ಮಿಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ
ಪ್ರಸ್ತುತ ಕಾರ್ಮಿಕರ ರಕ್ಷಣೆಗಾಗಿ ಸೇನಾ ತಂಡಗಳು, ಡೈವರ್‌ಗಳು, ಹೆಲಿಕಾಪ್ಟರ್‌ಗಳು ಮತ್ತು ಎಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ ಎಂದು ಸೇನೆಯು ಹೇಳಿಕೆಯಲ್ಲಿ ಮಾಹಿತಿ ನೀಡಿದೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ದಿಮಾ ಹಸಾವೊದಲ್ಲಿನ ಜಿಲ್ಲಾ ಪೊಲೀಸ್ ಮುಖ್ಯಸ್ಥ ಮಯಾಂಕ್ ಕುಮಾರ್, “ನಿನ್ನೆ ಗಣಿಯಲ್ಲಿ ಪ್ರವಾಹ ಉಂಟಾಯಿತು. ಗಣಿಗಾರರು ಬಹುಶಃ ಕೆಲವು ನೀರಿನ ಚಾನಲ್‌ಗೆ ಹೊಡೆದಿದ್ದಾರೆ. ಆ ನೀರು ಹೊರ ಬಂದು ಪ್ರವಾಹ ಉಂಟಾಗಿದೆ” ಎಂದು ತಿಳಿಸಿದರು.
