60% ಕಮಿಷನ್ | ನಿಮ್ಮ ಲೂಟಿಗೆ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕುಮಾರಸ್ವಾಮಿ ತಿರುಗೇಟು

Date:

Advertisements

ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ 60% ಕಮಿಷನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರವೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ ತಾಣದಲ್ಲಿ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್ ಮಾಡಿ ಸರಕಾರದ ವಿರುದ್ಧ ಪರ್ಸಂಟೇಜ್ ದಾಳಿ ಮಾಡಿರುವ ಅವರು, ಇಲ್ಲಿದೆ ನೋಡಿ ನಿಮ್ಮ ಲೂಟಿ ಸಾಕ್ಷಿಗುಡ್ಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದಾಖಲೆ ಕೊಡಿ, ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!! ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.

Advertisements

“ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ; ಜಲ ಸಂಪನ್ಮೂಲ: ₹14,600 ಕೋಟಿ, ಲೋಕೋಪಯೋಗಿ: ₹10,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: ₹3,100 ಕೋಟಿ, ಸಣ್ಣ ನೀರಾವರಿ: ₹2,800 ಕೋಟಿ, ಇತರೆ ಇಲಾಖೆ: ₹1,500 ಕೋಟಿ ಸೇರಿ ಒಟ್ಟು: ₹32,000 ಕೋಟಿ ಬಾಕಿ ಇದೆ” ಎಂದು ಹೇಳಿದ್ದಾರೆ.

“ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X